3:22 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕೊಲೆ ಆರೋಪಿಯಿಂದ ಪಿಎಸ್‌ಐ ಮೇಲೆ ಮಚ್ಚಿನಿಂದ ಹಲ್ಲೆ: ಪೊಲೀಸರಿಂದ ಗುಂಡು ಹಾರಾಟ

16/07/2022, 17:43

ಕಲಬುರಗಿ(reporterkarnataka.com): ಶಹಾಬಾದ್ ನಗರಸಭೆ ಮಾಜಿ ಅಧ್ಯಕ್ಷ ಗಿರೀಶ್ ಕಂಬಾನೂರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿಯೊಬ್ಬ ಪಿಎಸ್ಐ ಮೇಲೆ ಗಂಭೀರ ಹಲ್ಲೆ ನಡೆಸಿದ ಆಘಾತಕ್ಕಾರಿ ಘಟನೆ ನಡೆದಿದೆ.

ವಿಜಯಕುಮಾರ್ ಹಳ್ಳಿ ಎಂಬಾತನನ್ನು ಪಂಚನಾಮೆಗೆ ಕರೆದೊಯ್ದ ಸಂದರ್ಭದಲ್ಲಿ ಶಹಾಬಾದ್ ಪಿಎಸ್‌ಐ ಸುವರ್ಣಾ ಅವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಸುವರ್ಣಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರತಿಯಾಗಿ ಪೊಲೀಸರು ವಿಜಯಕುಮಾರನತ್ತ ಗುಂಡು ಹಾರಿಸಿದ್ದು, ಆತನಿಗೂ ಗಾಯಗಳಾಗಿವೆ. ಇಬ್ಬರನ್ನೂ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚೆಗೆ ಗಿರೀಶ ಕಂಬಾನೂರ ಅವರನ್ನು ಎರಡು ತಲ್ವಾರ್‌ಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಎರಡು ತಂಡಗಳಲ್ಲಿ ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದರು.

ತಡರಾತ್ರಿ ಆರೋಪಿ ವಿಜಯಕುಮಾರ್ ಹಳ್ಳಿ ಹಾಗೂ ಇತರರನ್ನು ಬಂಧಿಸಲಾಗಿತ್ತು. ಶಹಾಬಾದ್ ಬಳಿಯ ತೊನಸನಹಳ್ಳಿ ಗ್ರಾಮದ ಬಳಿ ತಲ್ವಾರ್ ಹಾಗೂ ಬಂದೂಕು ಎಸೆದು ಹೋಗಿದ್ದ ಜಾಗದಲ್ಲಿ ಪಂಚನಾಮೆ ನಡೆಸಲು ಆರೋಪಿಗಳನ್ನು ಕರೆದೊಯ್ಯಲಾಗಿತ್ತು.

ಬಂದೂಕು ಎಸೆದಿದ್ದ ಸ್ಥಳವನ್ನು ತೋರಿಸುವ ನಟನೆ ಮಾಡಿದ ವಿಜಯಕುಮಾರ್ ಹಳ್ಳಿ ಪಿಎಸ್‌ಐ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ತಕ್ಷಣ ಎಚ್ಚೆತ್ತ ಸಿಪಿಐ ಪ್ರಕಾಶ್ ಯಾತನೂರ ವಿಜಯಕುಮಾರ್‌ನತ್ತಲೂ ಗುಂಡು ಹಾರಿಸಿದರು. ಎಡಗಾಲಿಗೆ ಗಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು