5:00 AM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ನಾಳೆ ದ.ಕ. ಜಿಲ್ಲೆಯಲ್ಲಿ ಇನ್ನಷ್ಟು ಕಠಿಣ ನಿಯಮ, ಅಗತ್ಯ ವಸ್ತು ಖರೀದಿಗೆ ವಾಹನಗಳಲ್ಲಿ ಬಂದರೆ ವಾಹನ ಸೀಝ್: ಕಮೀಷನರ್ ಖಡಕ್ ಸೂಚನೆ

09/05/2021, 13:47

ಮಂಗಳೂರು(Reporter Karnataka News):

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೇ 10 ರಿಂದ 24 ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ.
ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮತ್ತೆ ಕಠಿಣ ನಿಯಮ ಜಾರಿಗೆ ಕಮೀಷನರ್ ಶಶಿಕುಮಾರ್ ಮುಂದಾಗಿದ್ದಾರೆ.
ಅಗತ್ಯ ವಸ್ತುಗಳ ಖರೀದಿಗೆ ವಾಹನಗಳಲ್ಲಿ ಜನರು ಆಗಮಿಸುತ್ತಿದ್ದು ಲಾಕ್ ಡೌನ್ ರೂಲ್ಸ್ ಬ್ರೇಕ್ ಮಾಡುತ್ತಿದ್ದಾರೆ. ಅಗತ್ಯ ವಸ್ತುಗಳ ಖರೀದಿ ನೆಪದಲ್ಲಿ ಆ ಸಮಯವನ್ನು ವಾಹನ ಮಾಲೀಕರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ನಾಳೆಯಿಂದ ಅಗತ್ಯ ವಸ್ತುಗಳ ಖರೀದಿಗೆ ವಾಹನಗಳಲ್ಲಿ ಬಂದರೆ ವಾಹನ ಸೀಝ್ ಮಾಡುವಂತೆ ಕಮೀಷನರ್ ಖಡಕ್ ಸೂಚನೆ ನೀಡಿದ್ದಾರೆ.
ತೀರಾ ಅಗತ್ಯವಿರುವವರು ನಡೆದುಕೊಂಡು ಬಂದು ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗುವಂತೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು