9:54 AM Tuesday13 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಕೆಲಸದ ವಿಚಾರದಲ್ಲಿ ಗಲಾಟೆ: ಕಟ್‌‌ಬೆಲ್ತೂರಿನ ಹರೆಗೋಡಿನಲ್ಲಿ ವ್ಯಕ್ತಿಗೆ ಬಿದಿರಿನ ಕೋಲಿನಿಂದ ಹಲ್ಲೆ

16/07/2022, 21:57

ಕುಂದಾಪುರ(reporterkarnataka.com): ಕೆಲಸದ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ ಘಟನೆ ಕಟ್‌‌ಬೆಲ್ತೂರು ಗ್ರಾಮದ ಹರೆಗೋಡು ಎಂಬಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

ಕಟ್‌‌ಬೆಲ್ತೂರು ಗ್ರಾಮದ ಮುತ್ತಪ್ಪ ಪೂಜಾರಿ ಹಲ್ಲೆಗೊಳಗಾದ ವ್ಯಕ್ತಿ. ಇವರು ಇಂದು ಹರೆಗೋಡು ಮನೋಜ್ ಶೆಟ್ಟಿಯವರ ಸಿಗಡಿ ಕೆರೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಆರೋಪಿ ರಾಘವೇಂದ್ರ ಎಂಬಾತನು ‘ನೀನು ನಮಗೆ ಕೆಲಸ ಇಲ್ಲದ ಹಾಗೆ ಮಾಡಿದ್ದಿಯಾ, ನಿನ್ನನ್ನು ಹೇಗೆ ಓಡಿಸಬೇಕೆಂದು ಗೊತ್ತಿದೆ ಎಂದು ಬೆದರಿಕೆ ಹಾಕಿದ್ದಾನೆ.‌ ಅಲ್ಲದೆ, ನಾನು ಆರೋಪಿಗೆ ನೀನು ಇಲ್ಲಿಂದ ಹೋಗು ಎಂದು ಹೇಳಿದ್ದಕ್ಕೆ ಆತ ‘ನನ್ನನ್ನು ಕೈಯಿಂದ ದೂಡಿ, ಬಿದಿರಿನ ಕೋಲಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ್ದಾನೆ ಎಂದು ಮುತ್ತಪ್ಪ ದೂರಿನಲ್ಲಿ ತಿಳಿಸಿದ್ದಾರೆ. ಅದರಂತೆ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು