ಇತ್ತೀಚಿನ ಸುದ್ದಿ
ಚಾರ್ಮಾಡಿ ಘಾಟ್ ನಲ್ಲಿ ಕ್ಯಾಂಟರ್ ಪಲ್ಟಿ: ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು
17/07/2022, 18:48
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಭಾರಿ ಮಳೆ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕ್ಯಾಂಟರ್ ಲಾರಿಯೊಂದು ಭಾನುವಾರ ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟ್ ನಲ್ಲಿ ಪಲ್ಟಿಯಾದ ಘಟನೆ ನಡೆದಿದೆ.
ಮೂಡಿಗೆರೆ ತಾಲೂಕಿಗೆ ಸೇರಿದ ಚಾರ್ಮಾಡಿ ಘಾಟ್ ವ್ಯಾಪ್ತಿಯ ಸೋಮನಕಾಡು ಸಮೀಪ ಈ ದುರ್ಘಟನೆ ನಡೆದಿದೆ.
ರಸ್ತೆಯ ಎಡ ಬದಿಗೆ ಕ್ಯಾಂಟರ್ ಉರುಳಿ ಬಿದ್ದ ಪರಿಣಾಮ ಯಾವುದೇ ಅನಾಹುತ ಸಂಭವಿಸಿಲ್ಲ. ರಸ್ತೆಯ ಬಲ ಬದಿಗೆ ಬಿದ್ದಿದ್ರೆ ಕ್ಯಾಂಟರ್
ಪ್ರಪಾತಕ್ಕೆ ಉರುಳುತ್ತಿತ್ತು. ಅದೃಷ್ಟವಶಾತ್ ಕ್ಯಾಂಟರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕ್ಯಾಂಟರ್ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು. ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.