12:06 AM Friday27 - February 2026
ಬ್ರೇಕಿಂಗ್ ನ್ಯೂಸ್
ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ

ಇತ್ತೀಚಿನ ಸುದ್ದಿ

ಕೂಡ್ಲಿಗಿ: 2 ಪ್ರತ್ಯೇಕ ಕರಡಿ ದಾಳಿ ಪ್ರಕರಣ; ಯುವಕ ಮತ್ತು ನಡು ವಯಸ್ಕ ಮಹಿಳೆಗೆ ಗಾಯ; ಸ್ಥಳೀಯರ ಆಕ್ರೋಶ

18/07/2022, 16:23

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಓಬಳಶೆಟ್ಟಿ ಹಳ್ಳಿ ಹಾಗೂ ಹುಲಿಕೊಂಟೆ ಗ್ರಾಮದಲ್ಲಿ ಕರಡಿ ದಾಳಿ ನಡೆಸಿದ ಎರಡು ಪ್ರತ್ಯೇಕ ಪ್ರಕರಣಗಳು ನಡೆದಿದ್ದು, ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತನಾದ ಕಾಡಪ್ಪರ ಸೋಮಶೇಖರ್ (38) ಎಂಬವರು ತನ್ನ ಜಮೀನಿನಲ್ಲಿ ಬೆಳಗಿನ ಜಾವ ನೀರು ಹಾಯಿಸುವ ಸಂದರ್ಭದಲ್ಲಿ ಕರಡಿಯು  ದಾಳಿ ಮಾಡಿ ಕೈ ಬೆರಳನ್ನು ತುಂಡು ತುಂಡಾಗಿ ಮಾಡಿದೆ. ಇನ್ನೊಂದು ಪ್ರಕರಣದಲ್ಲಿ ಹುಲಿಕುಂಟೆ ಗ್ತಾಮದ ಓಬಕ್ಕ(45) ಎಂಬವರು


ಬರ್ಹಿದೆಸೆಗೆಂದು ಗ್ರಾಮದ ಅಂಚಿನ ಹೊಲಕ್ಕೆ ತೆರಳಿದ ಸಂದರ್ಭದಲ್ಲಿ ಕರಡಿ ದಾಳಿ ಮಾಡಿದೆ. ಓಬಕ್ಕ ತೀರ್ವ ಗಾಯಗೊಂಡಿದ್ದು ಚಿಕ್ಕಜೋಗಿಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಹೆಚ್ಚಿನ ಚಿಕಿತ್ಸೆಗೆ  ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆಸ್ಪತ್ರೆಯ ಸಿಬ್ಬಂದಿ ತಿಳಿಸಿದ್ದಾರೆ.

ಈ ರೀತಿ  ಪದೇ ಪದೇ ಇಂತಹ ಘಟನೆಗಳು ತಾಲ್ಲೂಕಿನಲ್ಲಿ ನಡೆಯುತ್ತಿವೆ. ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳು ತಕ್ಷಣ ಭೇಟಿ ನೀಡಿ ಗ್ರಾಮದ ಜನರನ್ನು ವಿಚಾರಿಸಿ ಕಾಡಂಚಿನಲ್ಲಿ   ಕರಡಿಯ ಬೋನುಗಳನ್ನು ಹಾಕಿ ಕರಡಿಗಳನ್ನು ಹಿಡಿದು ಕರಡಿ ಧಾಮಕ್ಕೆ ಬಿಡಬೇಕು. ಇಂತಹ ಘಟನೆಗಳನ್ನು ತಪ್ಪಿಸಬೇಕು ಎಂದು  ಗ್ರಾಮಗಳ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು