6:37 AM Sunday5 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ರಾಜ್ಯದ 17 ಜಿಲ್ಲೆಗಳಲ್ಲಿ ಇಂದಿನಿಂದ ಅನ್ ಲಾಕ್ : ಕೆಎಸ್ಸಾರ್ಟಿಸಿ, ಬಿಎಂಟಿಸಿ, ಮೆಟ್ರೋ ರೈಲು ಸಂಚಾರ

21/06/2021, 07:53

ಬೆಂಗಳೂರು(reporterkarnataka news):ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಇಳಿಮುಖವಾಗುತ್ತಿದ್ದಂತೆ ಅನ್ ಲಾಕ್ ಪ್ರಕ್ರಿಯೆ ಇಂದಿನಿಂದ (ಜೂನ್ 21) ಜಾರಿಯಾಗುತ್ತಿದ್ದು, ರಾಜ್ಯದ 13 ಜಿಲ್ಲೆಗಳನ್ನು ಹೊರತುಪಡಿಸಿ ಮಿಕ್ಕ ಜಿಲ್ಲೆಗಳಲ್ಲಿ ಕೆಸ್ಸಾರ್ಟಿಸಿ ಬಸ್ ರಸ್ತೆಗಿಳಿಯಲಿವೆ. ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗಳು ಕೂಡ ಕೆಎಸ್ಸಾರ್ಟಿಸಿ ಜತೆ ಓಡಾಟ ನಡೆಸಲಿವೆ. ಮೆಟ್ರೋ ಸಂಚಾರ ಕೂಡ ತೆರೆದುಕೊಳ್ಳಲಿದೆ. ಶೇ. 50ರಷ್ಟು ಪ್ರಯಾಣಿಕರ ಮಿತಿಯೊಂದಿಗೆ ಇವಕ್ಕೆಲ್ಲ ಅವಕಾಶ ಮಾಡಿಕೊಡಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ 6400 ಬಿಎಂಟಿಸಿ ಬಸ್ಸುಗಳಿವೆ. ಅನ್‌ಲಾಕ್‌ ಮೊದಲ ಹಂತದಲ್ಲಿ 1,500 ರಿಂದ 2,000 ಸಾವಿರ ಬಸ್ಸುಗಳು ರಸ್ತೆಗಿಳಿಯಲಿವೆ.  ಡ್ರೈವರ್, ಕಂಡಕ್ಟರ್ ವ್ಯಾಕ್ಸಿನ್ ಕಡ್ಡಾಯವಾಗಿ ಪಡೆದುಕೊಂಡಿರಬೇಕು. 2 ಡೋಸ್ ವ್ಯಾಕ್ಸಿನ್ ತೆಗೆದುಕೊಂಡವರಿಗೆ ಮಾತ್ರ ಅವಕಾಶ ನೀಡಬಹುದು. ಇನ್ನೂ ಬಸ್ ನಲ್ಲಿ ಪ್ರಯಾಣಿಕರಿಗೆ

ನಿಂತು ಪ್ರಯಾಣ ಮಾಡಲು ಅವಕಾಶ ಇರುವುದಿಲ್ಲ. ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸೋಮವಾರದಿಂದ ನಮ್ಮ ಮೆಟ್ರೋ ಕೂಡ ಸೇವೆ ಆರಂಭಿಸಲಿದೆ.

ಕಾರ್ಡ್ ಬಳಸಿ ಮೆಟ್ರೋ ಸೇವೆ ಪಡೆಯಬಹುದು.ಅನ್ ಲಾಕ್ ಆಗಿರುವ ಜಿಲ್ಲೆಗಳಲ್ಲಿ ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅವಕಾಶ ನೀಡಲಾಗಿದೆ. ನಾನ್‌ ಎಸಿ, ಹವಾ ನಿಯಂತ್ರಣ ಇಲ್ಲದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ಊಟ ಮಾಡಲು ಸಂಜೆ 5.00 ಗಂಟೆವರೆಗೆ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು