11:57 AM Sunday19 - January 2025
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಸಚಿವ ಚಲುವರಾಯಸ್ವಾಮಿ ಮನವಿ: ಕೇಂದ್ರ ಸಮ್ಮತಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಗ್ರಾಪಂ ಮಾಜಿ ಅಧ್ಯಕ್ಷರಿಂದ ಅಂತ್ಯ ಸಂಸ್ಕಾರ: ರಾತ್ರಿ… ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ… ಸಂಭ್ರಮ- ಸಡಗರಕ್ಕೆ ಸಾಕ್ಷಿಯಾದ ಕಡಲನಗರಿಯ ಮಂಗಳಾ ಕ್ರೀಡಾಂಗಣ: 4500 ಕ್ರೀಡಾಪಟುಗಳ ಪಾದಸ್ಪರ್ಶ ಎಷ್ಟಾದರೂ ಹಣ-ಸವಲತ್ತು ಕೇಳಿ ಕೊಡ್ತೀನಿ, ಆದರೆ ಒಲಂಪಿಕ್ ಮೆಡಲ್ ತನ್ನಿ: ಮಂಗಳೂರಿನಲ್ಲಿ ಸಿಎಂ… ಮಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಸಿಎಂ ಸಿದ್ದರಾಮಯ್ಯ… ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ… ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ…

ಇತ್ತೀಚಿನ ಸುದ್ದಿ

ಮಂಕಿ ಪಾಕ್ಸ್: ಮಂಗಳೂರು ಏರ್ ಫೋರ್ಟ್ ನಲ್ಲಿ ಕಟ್ಟೆಚ್ಚರಕ್ಕೆ ಜಿಲ್ಲಾಧಿಕಾರಿ ಸೂಚನೆ; ವೆನ್ಲಾಕ್ ನಲ್ಲಿ ಐಸೋಲೇಶನ್ ವಾರ್ಡ್

19/07/2022, 20:23

ಮಂಗಳೂರು(reporterkarnataka.com): ನಗರದ ಹೊರವಲಯದಲ್ಲಿರುವ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾನ್ಪರೆನ್ಸ್ ಹಾಲ್‍ನಲ್ಲಿ ಜು.19ರ ಮಂಗಳವಾರ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಅಧ್ಯಕ್ಷತೆಯಲ್ಲಿ ಮಂಕಿಪಾಕ್ಸ್ ಹರಡದಂತೆ ಕೈಗೊಳ್ಳಬೇಕಾದ ಮುಂಜಾಗತಾ ಕ್ರಮಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.

ಸಭೆಯ ಆರಂಭದಲ್ಲಿ ಕೇರಳ ರಾಜ್ಯದಲ್ಲಿ ಮಂಕಿ ಪಾಕ್ಸ್ ಪ್ರಕರಣಗಳು ಪತ್ತೆಯಾದ ಬಗ್ಗೆ ವಿವರಿಸಿದ ಜಿಲ್ಲಾಧಿಕಾರಿಯವರು, ಹೆಚ್ಚಿನ ಕೇರಳ ಪ್ರಯಾಣಿಕರು ಮಂಗಳೂರಿನ ವಿಮಾನ ನಿಲ್ದಾಣದಿಂದ ಕೇರಳಕ್ಕೆ ರಸ್ತೆ ಮಾರ್ಗವಾಗಿ ಸಂಚರಿಸುವುದರಿಂದ, ಮಂಗಳೂರಿನ ವಿಮಾನ ನಿಲ್ದಾಣದ ಸಿಬ್ಬಂದಿಗಳಿಗೆ ಮಂಕಿ ಫಾಕ್ಸ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಏರ್‍ಲೈನ್ಸ್ ಸಿಬ್ಬಂದಿಗಳು ವಿಮಾನ ಲ್ಯಾಂಡಿಂಗ್ ಆಗುವ ಮೊದಲೆ ವಿಮಾನದಲ್ಲಿ  ಜ್ವರ ಹಾಗೂ ಚರ್ಮದ ಗುಳ್ಳೆಗಳು ಬರುವರನ್ನು ಪತ್ತೆ ಹಚ್ಚಬೇಕು, ಆ ಲಕ್ಷಣಗಳುಳ್ಳವರು ಕಂಡು ಬಂದರೆ ಅವರನ್ನು ಪ್ರತ್ಯೇಕಿಸಬೇಕು ಹಾಗೂ ವಿಮಾನ ನಿಲ್ದಾಣದಲ್ಲಿರುವ ಆರೋಗ್ಯಾಧಿಕಾರಿಗಳಿಂದ ತಪಾಸಣೆ ಮಾಡಿಸಬೇಕು ಹಾಗೂ ಆಗಿಂದಾಗ್ಗೆ ಇದರ ಬಗ್ಗೆ ಮನವರಿಕೆ  ಮಾಡಬೇಕು. ವಿಮಾನ ಲ್ಯಾಂಡ್  ಆದ ಮೇಲೆ ಪ್ರಯಾಣಿಕರನ್ನು ಮೇಲ್ವಿಚಾರಣೆ ಮಾಡುವ ಸಿಬ್ಬಂದಿಗಳು ಜ್ವರ ಹಾಗೂ ಚರ್ಮದ ಗುಳ್ಳೆಯ ಬಗ್ಗೆ ಪ್ರಯಾಣಿಕರಿಂದ ಖಚಿತ ಪಡಿಸಿಕೊಳ್ಳಬೇಕು. ರೋಗ ಲಕ್ಷಣಗಳಿರುವ ಪ್ರಯಾಣಿಕರನ್ನು (ಸಂಶಯಾಸ್ಪದ) ಪ್ರತ್ಯೇಕಿಸಿ ಆಂಬುಲೆನ್ಸ್ ನಲ್ಲಿ ಈಗಾಲೇ ವೆನ್ ಲಾಕ್ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ತೆರೆಯಲಾದ ಮಂಕಿ ಪಾಕ್ಸ್ ಐಸೋಲೇಶನ್ ವಾರ್ಡ್‍ಗೆ ದಾಖಲಿಸುವಂತೆ ಸೂಚಿಸಿದರು.

ಮಂಕಿ ಪಾಕ್ಸ್ ಹರಡದಂತೆ ಜಾಗೃತಿ ಮೂಡಿಸುವ ಕನ್ನಡ, ಮಲಯಾಳಂ, ಹಿಂದಿ, ಇಂಗ್ಲೀಷ್  ಭಾಷೆಯಲ್ಲಿ ಐ.ಇ.ಸಿ ಸ್ಟ್ಯಾಂಡಿಗಳನ್ನು ಸಿದ್ದಪಡಿಸಲು ಜಿಲ್ಲೆಯ ಕೋವಿಡ್ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿ ಮಾಹಿತಿ ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿಯವರು, ವಿಮಾನ ನಿಲ್ದಾಣದ ಅಧಿಕಾರಿಗಳು, ಸ್ಟ್ಯಾಂಡಿಗಳನ್ನು ತಯಾರಿಸಿ ವಿವಿಧ ಸ್ಥಳಗಳಲ್ಲಿ ಪ್ರರ್ದಶಿಸುವಂತೆ ಸೂಚಿಸಿದರು. 

ಮಂಕಿಪಾಕ್ಸ್ ಜಾಗೃತಿ ಮೂಡಿಸುವ ವಿವಿಧ ಫೋಟೋಗಳನ್ನು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿ ಹಾಗೂ ಸಿಬ್ಬಂದಿಗಳ ವಾಟ್ಸ್ ಗ್ರೂಪ್‍ನಲ್ಲಿ ಶೇರ್ ಮಾಡಲು  ವಿಮಾನ ನಿಲ್ದಾಣ ಆರೋಗ್ಯಾಧಿಕಾರಿ ಹಾಗೂ ಏರ್‍ಲೈನ್ಸ್ ಅಧಿಕಾರಿಯವರಿಗೆ ನಿರ್ದೇಶನ ನೀಡಿದರು.

ಮಂಕಿ ಫಾಕ್ಸ್ ಬಗ್ಗೆ ಕ್ಯಾಬ್ ಚಾಲಕರಿಗೆ ವಿಮಾನನಿಲ್ದಾಣದ ಅಧಿಕಾರಿಗಳು ಅರಿವು ಮೂಡಿಸಬೇಕು, ವಿಮಾನ ನಿಲ್ದಾಣದ ಡಿಜಿಟಲ್ ಡಿಸ್‍ಪ್ಲೇಯಲ್ಲಿ ಹಾಗೂ ಮೈಕ್ ಮೂಲಕ ಅರಿವು ಮೂಡಿಸಬೇಕು, ಮಂಕಿ ಫಾಕ್ಸ್ ಹರಡದಂತೆ ಜಿಲ್ಲಾಡಳಿತ ಸಾಕಷ್ಟು ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದೆ,  ಜನರು ಭಯಭೀತರಾಗದೆ ಅರಿವು ಮೂಡಿಸುವಲ್ಲಿ ಜಿಲ್ಲಾಡಳಿತದೊಂದಿಗೆ ಕೈಜೋಡಿಸುವಂತೆ ಕೋರಿದರು.


ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜೇಶ್ ಬಿ.ವಿ,  ಕೋವಿಡ್ ನೋಡಲ್ ಅಧಿಕಾರಿ ಡಾ.ಅಶೋಕ್ ಹೆಚ್ , ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಗದೀಶ್ ಕೆ., ವಿಮಾನ ನಿಲ್ದಾಣದ ಹೆಡ್ ಆಪರೇಷನ್ ಆಫಿಸರ್ ಶ್ರೀಕಾಂತ್ ಟಾಟಾ, ವಿಮಾನ ನಿಲ್ದಾಣ ವೈದ್ಯಾಧಿಕಾರಿ ಡಾ. ನಿಶಿತ, ಏರ್‍ಲೈನ್ಸ್ ಮುಖ್ಯಸ್ಥರು, ಕಸ್ಟಮ್ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಸಭೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು