11:24 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜಿನಲ್ಲಿ ಫುಡ್ ಫೆಸ್ಟ್: ತುಳುನಾಡಿನ ವಿವಿಧ ಆಹಾರೋತ್ಪನ್ನಗಳ ಪ್ರದರ್ಶನ

19/07/2022, 21:14

ಚಿತ್ರ/ವರದಿ: ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ನಗರದ ವಿಶ್ವವಿದ್ಯಾನಿಲಯ ಕಾಲೇಜಿನ  ಪ್ರವಾಸೋದ್ಯಮ ವಿಭಾಗ ಹಾಗೂ ಕಾಮರ್ಸ್ ವಿಭಾಗದ ವತಿಯಿಂದ ಫುಡ್ ಫೆಸ್ಟ್ ಬಂಜಾರ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಬಂಟ್ವಾಳ ಬಂಟ ಸಂಘದ ಅಧ್ಯಕ್ಷ ಚಂದ್ರಹಾಸ ಡಿ. ಶೆಟ್ಟಿ ಉದ್ಘಾಟಿಸಿದರು.


ನಂತರ ಮಾತನಾಡಿದ ಅವರು, ನಮ್ಮ ಹಿರಿಯರು ಮಾರ್ಗದರ್ಶನ ಮಾಡಿದಂತಹ ಆಹಾರ ಪದ್ಧತಿಗಳು ಔಷಧ ಮೂಲವಾಗಿದೆ. ಯಾವುದೆ ಅಡ್ಡ ಪರಿಣಾಮ ಗಳಿಲ್ಲ. ಪಾಶಿಮಾತ್ಯಾ ಶೈಲಿಯ ಜಂಕ್ ಫುಡ್ ಆರೋಗ್ಯಕ್ಕೆ ಹಾನಿಕಾರಕ. ನಮ್ಮಲ್ಲಿನ ವಿವಿಧ ಬಗೆಯ ಆಹಾರೋತ್ಪನ್ನಗಳು ಬೇರೆಲ್ಲೂ ಸಿಗಲು ಸಾಧ್ಯವಿಲ್ಲ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಸಿಂಡಿಕೇಟ್ ಸದಸ್ಯ ರಮೇಶ್ ಕೆ. ಮಾತನಾಡಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳು ಜೀವನದಲ್ಲಿ ವೈಯಕ್ತಿಕ ಉದ್ದಿಮೆ ಮಾಡುವ ನಿಟ್ಟಿನಲ್ಲಿ ಸಹಾಯಕ ಎಂದು ಹೇಳಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯಾ ವಹಿಸಿದ್ದರು. ನಂತರ ಮಾತಾಡಿ ಅವರು, ಅಚ್ಚುಕಟ್ಟಾಗಿ ಆಹಾರೋತ್ಪನ್ನ ಗಳಿಗೆ ಶೀರ್ಷಿಕೆ ನೀಡಿ ಈ ವ್ಯವಸ್ಥೆ ಮಾಡಲಾಗಿದೆ. ಐದು ವಿದ್ಯಾರ್ಥಿಕಲಿಕಾ ನಿಟ್ಟಿನಲ್ಲಿ ಪ್ರಯೋಜನ ಕಾರಿ ಎಂದು ಅವರು ನುಡಿದರು.



ಬಿ. ಬಿ.ಎ (ಟಿ. ಟಿ )ವಿಭಾಗ ಮುಖ್ಯಸ್ಥ ಡಾ. ಎ. ಸಿದ್ದಿಕ್, ಬಿ. ಎ (ಟಿ. ಟಿ.ಎಂ)ವಿಭಾಗ ಮುಖ್ಯಸ್ತೆ ಡಾ. ಮೀನಾಕ್ಷಿ ಎಂ. ಎಂ. ಮತ್ತಿರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ವಿಭಾಗದ ಉಪನ್ಯಾಸಕರಾದ ಶ್ರೀರಾಜ್,ಪರಿಣಿತ,ಎಚ್.ಆರ್. ಡಿ ವಿಭಾಗ ಉಪನ್ಯಾಸಕಿ ರೋವಿನ ಮತ್ತಿತರರು ಉಪಸ್ಥಿತರಿದ್ದರು.

ಫುಡ್ ಫೆಸ್ಟ್ ನಲ್ಲಿ ತುಳುನಾಡಿನ ಅನೇಕ ಆಹಾರೋತ್ಪನ್ನ ಗಳು ಪ್ರದರ್ಶನ ಗೊಂಡಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು