2:18 AM Friday19 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಡೆಂಗೆ ಡಂಗುರ: 18 ದಿನಗಳಲ್ಲಿ 910 ಮಂದಿಗೆ ಜ್ವರ; ಬೆಂಗಳೂರು ಬಿಟ್ಟರೆ ಉಡುಪಿಯಲ್ಲಿ ಅತ್ಯಧಿಕ!

19/07/2022, 22:58

ಬೆಂಗಳೂರು(reporterkarnataka.com):ರಾಜ್ಯದಲ್ಲಿ ಒಂದೆಡೆ ಪ್ರವಾಹ, ಭೂಕುಸಿತ ಉಂಟಾದರೆ, ಇನ್ನೊಂದೆಡೆ ಕೊರೊನಾ ಭೀತಿಯ ನಡುವೆ ಡೆಂಗೆ ಪ್ರಕರಣಗಳು ಸದ್ದಿಲ್ಲದೆ ಹೆಚ್ಚಾಗುತ್ತಿವೆ. ಕಳೆದ 18 ದಿನಗಳಲ್ಲೇ ಬರೋಬ್ಬರಿ 910 ಮಂದಿಗೆ ಜ್ವರ ಕಾಣಿಸಿಕೊಂಡಿದೆ.

ರಾಜ್ಯದಲ್ಲಿ 18 ದಿನಗಳಲ್ಲಿ 910 ಮಂದಿಗೆ ಡೆಂಗೆ ಜ್ವರ ಕಾಣಿಸಿಕೊಂಡಿದೆ. ಈ ಮೂಲಕ ಇಲ್ಲಿಯವರೆಗೆ 3,384 ಜನರಿಗೆ ಡೆಂಗೆ ಕೇಸ್ ಏರಿಕೆಯಾದಂತೆ ಆಗಿದೆ.

ಬೆಂಗಳೂರು ನಗರದಲ್ಲಿ 585, ದಕ್ಷಿಣ ಕನ್ನಡ -176, ಉಡುಪಿ-356, ಚಿತ್ರದುರ್ಗ 163, ದಾವಣಗೆರೆ 114, ಹಾಸನ 124, ಬೆಳಗಾವಿ 103, ಕೊಪ್ಪಳ 100, ಮೈಸೂರು 346, ಶಿವಮೊಗ್ಗ 158, ಕಲಬುರ್ಗಿ 101 ಹಾಗೂ ವಿಜಯಪುರ 110 ಡೆಂಗೆ ಪ್ರಕರಣಗಳು ವರದಿಯಾಗಿವೆ.

ರಾಜ್ಯ ಆರೋಗ್ಯ ಇಲಾಖೆಯಿಂದ ಜನವರಿ 1ರಿಂದ ಜೂನ್ 24ರವರೆಗೆ 62,357 ಮಂದಿಯನ್ನು ಡೆಂಗ್ಯೂ ಶಂಕೆಯಿಂದ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ 3,384 ಮಂದಿಗೆ ಡೆಂಗೆ ನಿಂದಾಗಿ ಜ್ವರ ಕಾಣಿಸಿಕೊಂಡಿದ್ದು ದೃಢಪಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು