1:02 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಕಸ್ತೂರಿ ರಂಗನ್ ವರದಿ‌: ದಕ್ಷಿಣ ಕನ್ನಡ ಜಿಲ್ಲೆಯ 40ಕ್ಕೂ ಹೆಚ್ಚು ಗ್ರಾಮಗಳು ಡೇಂಜರ್ ಝೋನ್ ನಲ್ಲಿ!

21/07/2022, 10:57

ಮಂಗಳೂರು(reporterkarnataka.com): ಕಸ್ತೂರಿ ರಂಗನ್ ವರದಿಯನ್ನು ಆಧರಿಸಿ ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ವಲಯ ಗುರುತಿಸುವ ಕೇಂದ್ರ ಪರಿಸರ ಇಲಾಖೆಯ 5ನೇ ಅಧಿಸೂಚನೆಯನ್ನು ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ 43 ಗ್ರಾಮಗಳು ಡೇಂಜರ್ ಝೋನ್ ನಲ್ಲಿದೆ.

ಪರಿಸರ ಇಲಾಖೆಯ ಈ ಅಧಿಸೂಚನೆಗೆ ರಾಜ್ಯ ಸರ್ಕಾರ ಮತ್ತು ಶಾಸಕರು ವಿರೋಧವನ್ನು ವ್ಯಕ್ತಪಡಿಸುತ್ತಿದ್ದಾರೆ.ಕೇಂದ್ರ ಪರಿಸರ ಇಲಾಖೆ ಜುಲೈ 4ರಂದು ಅಧಿಸೂಚನೆಯನ್ನು ಹೊರಡಿಸಿ ಆಕ್ಷೇಪಣೆಯನ್ನು ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಿದೆ. 

ಕಸ್ತೂರಿ ರಂಗನ್ ವರದಿಯನ್ನು ಆಧರಿಸಿ ಹೊರಡಿಸಿರುವ ಆದೇಶವನ್ನು ಅಧಿಸೂಚನೆಯನ್ನು ಅನುಸರಿಸಿದರೆ ರಾಜ್ಯದ ಕರಾವಳಿ, ಮಲೆನಾಡು, ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ವಾಸಿಸುವ ಜನ ಜೀವನವೇ ಅಸ್ತವ್ಯಸ್ತವಾಗುವ ಆತಂಕ ಎದುರಾಗಿದೆ.

ಕೇಂದ್ರ ಸರ್ಕಾರಕ್ಕೆ ಗಾಡ್ಗಿಳ್ ವರದಿಯು 2010ರಲ್ಲಿ ಸಲ್ಲಿಕೆಯಾಗಿತ್ತು. ಗಾಡ್ಗಿಳ್ ವರದಿ ಅವೈಜ್ಞಾನಿಕವಾಗಿದೆ ಎಂದು ಇಸ್ರೋ ವಿಜ್ಞಾನಿ ಕಸ್ತೂರಿ ರಂಗನ್ ನೇತೃತ್ವದ ಸಮಿತಿಯನ್ನು ರಚನೆಯನ್ನು ಮಾಡಲಾಗಿತ್ತು. ಕಸ್ತೂರಿ ರಂಗನ್ ಸಮಿತಿಯ ಅಧ್ಯಯನವನ್ನು ಮಾಡಿ ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪ್ರದೇಶ ಎಂದು ಪರಿಗಣಿಸಲು ವರದಿಯನ್ನು ನೀಡಿತ್ತು. ಅದರಂತೆ ಗುಜರಾತ್ ತಮಿಳುನಾಡಿ, ಮಹಾರಾಷ್ಟ್ರ, ಗೋವಾ, ಕರ್ನಾಟಕ ವ್ಯಾಪ್ತಿಯನ್ನು ಹೇಳಿತ್ತು. ಅದರಂತೆ ಕರ್ನಾಟಕದ 20668 ಚದರ ಕಿ.ಮೀ ಪ್ರದೇಶ ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿಗೆ ಒಳಪಡುತ್ತದೆ. ಅಂದರೆ ಕರುನಾಡಿನ ಸಾವಿರಾರು ಹಳ್ಳಿಯ ಜನರ ಬದುಕು ಬೀದಿಗೆ ಬೀಳಲಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿ, ಮಲವಂತಿಗೆ, ಕುತ್ಲೂರು, ಸುಲ್ಕೇರಿಮೊಗ್ರು, ಶಿರ್ಲಾಲು, ನಾವರಾ, ಸವಣಾಲು, ಚಾರ್ಮಾಡಿ, ಸುಲ್ಕೇರಿ, ನಾವೂರು, ನೆರಿಯ, ನಾಡ, ಪುದುವೆಟ್ಟು, ಶಿಶಿಲ, ಕಳೆಂಜಾ, ಶಿಬಾಜೆ, ರೆಖ್ಯಾ ಗ್ರಾಮಗಳು ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿಗೆ ಬರಲಿದೆ.

ಜಿಲ್ಲೆಯ ಕಡಬ ತಾಲೂಕಿನ ಕೌಕ್ರಾಡಿ ಗೋಳಿತೊಟ್ಟು, ಶಿರಾಡಿ, ಅಲಂತಾಯ, ಸಿರಿಬಾಗಿಲು, ಬಲ್ಯಾ, ಕೊಂಬಾರು, ಬಿಳಿನೆಲೆ, ದೊಳ್ಪಾಡಿ, ಬಳ್ಪ, ಏನೆಕಲ್ಲು, ಸುಬ್ರಮಣ್ಯ, ಐನೆಕಿದು ಗ್ರಾಮಗಳು ಕಸ್ತೂರಿ ರಂಗನ್ ವರದಿಯಲ್ಲಿವೆ.

ಸುಳ್ಯ ತಾಲೂಕಿನ ನಾಲ್ಕೂರು, ಕೂತ್ಕುಂಜ, ದೇವಚಳ್ಳ, ಹರಿಹರಪಲ್ಲತಡ್ಕ, ಬಾಳುಗೋಡು, ಮಡಪ್ಪಾಡಿ, ಉಬರಡ್ಕ ಮಿತ್ತೂರು, ಕಲ್ಮಕಾರು, ಅರಂತೋಡು, ಅಲೆಟ್ಟಿ, ಸಂಪಾಜೆ, ತೊಡಿಕಾನ ಗ್ರಾಮಗಳನ್ನು ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ವಲಯ ಗುರುತಿಸಲಾಗಿದೆ.

ಕಸ್ತೂರಿ ರಂಗನ್ ವರದಿಯನ್ನು ಅನುಷ್ಟಾನಗೊಳಿಸಿದರೆ ಈ ಹಳ್ಳಿಗರ ಅಭಿವೃದ್ಧಿಗೆ ಹಿನ್ನಡೆ ಆಗುವ ಅಪಾಯವಿದೆ. ವರದಿಯಲ್ಲಿ ಹೇಳಿರುವಂತೆ ಕನಿಷ್ಠ ಮೂಲಭೂತ ಸೌಕರ್ಯಗಳಿಂದಲೂ ವಂಚಿತವಾಗುವ ಅಪಾಯವಿದ್ದು, ಇದೇ ಕಾರಣಕ್ಕೆ ಜನರು ಈ ವರದಿಯನ್ನು ವಿರೋಧಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು