6:26 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮಣೂರು: ಕುಡಿತದ ಅಮಲಿನಲ್ಲಿ ಮಧುವೆಂದು ಇಲಿ ಪಾಷಾಣ ಸೇವಿಸಿ ವ್ಯಕ್ತಿ ಸಾವು 

21/07/2022, 12:16

ಬ್ರಹ್ಮಾವರ(reporterkarnataka.com):ಮಧು ಎಂದು ಇಲಿ ಪಾಷಾಣ ಸೇವಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಮಣೂರು ಗ್ರಾಮದ ಹೆಬ್ಬಾರ್ ಬೆಟ್ಟು ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. 

ಹೆಬ್ಬಾರ್ ಬೆಟ್ಟು ನಿವಾಸಿ ನಾರಾಯಣ ಖಾರ್ವಿ(58) ಮೃತದುರ್ದೈವಿ. ಇವರು ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು, ವಿಪರೀತ ಕುಡಿತದ ಚಟ ಹೊಂದಿದ್ದರು. ಜುಲೈ 13ರಂದು ಕುಡಿತ ಅಮಲಿನಲ್ಲಿ ಮಧು ಎಂದು ತಿಳಿದು ಕಿಟಕಿಯ ಬಳಿಯಿದ್ದ ಇಲಿ ಪಾಶಾಣವನ್ನು ಸೇವಿಸಿ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಬಳಿಕ ಅಲ್ಲಿಂದ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಯಲ್ಲಿದ್ದವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..  

ಇತ್ತೀಚಿನ ಸುದ್ದಿ

ಜಾಹೀರಾತು