11:23 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಗೋಹಂತಕರ ಆಸ್ತಿ ಮುಟ್ಟುಗೋಲಿಗೆ ಶಾಸಕ ವೇದವ್ಯಾಸ ಕಾಮತ್ ಖಡಕ್ ಸೂಚನೆ

21/07/2022, 22:07

ಮಂಗಳೂರು(reporterkarnataka.com): ನಗರದ ಬಜಾಲ್ ಪರಿಸರದಲ್ಲಿ ಗೋಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಗೋಕಳ್ಳರ ಬಂಧನಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಕ್ರಮವಾಗಿ ಗೋಹತ್ಯೆ, ಗೋಕಳ್ಳತನ ಪ್ರಕರಣಗಳನ್ನು ತಡೆಯಲು ಗೋಕಳ್ಳರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಸೂಚನೆ ನೀಡಿರುವ ಶಾಸಕ ಕಾಮತ್ ಗೋಕಳ್ಳರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ಬಜಾಲ್ ಕಾನಕರಿಯ ನಿವಾಸಿ ಅಶ್ವಿನ್ ಎಂಬವರ ಮನೆಯ ಹಟ್ಟಿಯಿಂದ ಗೋಕಳ್ಳತನವಾಗಿದ್ದು ಕಂಕನಾಡಿ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದ್ದು ಶಾಸಕ ಕಾಮತ್ ಸೂಚನೆಯಿಂದ ತನಿಖೆಗೆ ಮತ್ತಷ್ಟು ಚುರುಕು ದೊರೆತಿದೆ. 

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಶಾಸಕ ವೇದವ್ಯಾಸ್ ಕಾಮತ್, ಹಿಂದೂ ಧರ್ಮದಲ್ಲಿ ಗೋವಿಗೆ ಮಹತ್ತರವಾದ ಸ್ಥಾನವಿದೆ. ಗೋವಿನಿಂದಲೇ ಬದುಕು ಸಾಗಿಸುವ ಅನೇಕ ಕುಟುಂಬಗಳಿವೆ. ಆ ನಿಟ್ಟಿನಲ್ಲಿ ಈಗಾಗಲೇ ರಾಜ್ಯ ಸರಕಾರವು ಗೋಹತ್ಯೆ ಪ್ರತಿಬಂಧಕವನ್ನು ಜಾರಿಗೊಳಿಸಿದ್ದು ಗೋಕಳ್ಳರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಗೋಕಳ್ಳತನ, ಗೋಹತ್ಯೆಯ ಅಪರಾಧ ರುಜುವಾತಾದರೆ ಆಸ್ತಿಮುಟ್ಟುಗೋಲು ಹಾಕಲು ಸೂಚನೆ ನೀಡಿದ್ದು ಇದು ಗೋಕಳ್ಳರಿಗೆ ಎಚ್ಚರಿಕೆಯ ಸಂದೇಶವಾಗಿದೆ. ಮುಂದೆಯೂ ಇಂತಹ ಕೃತ್ಯಗಳಲ್ಲಿ ಭಾಗಿಯಾದರೆ ಮತ್ತಷ್ಟು ಕಠಿಣ ಶಿಕ್ಷೆ ಅನುಭವಿಸಲು ಸಿದ್ಧರಿರಬೇಕೆಂದು ಗೋಕಳ್ಳರಿಗೆ ಎಚ್ಚರಿಕೆ ನೀಡಿದ್ದಾರೆ. 

ಈ ಸಂದರ್ಭದಲ್ಲಿ ಕಂಕನಾಡಿ ಠಾಣಾಧಿಕಾರಿ ಸಿದ್ದಣ್ಣ ಗೌಡ ಭಜಂತ್ರಿ, ಹಿಂದೂ ಸಂಘಟನೆಯ ಮುಖಂಡರಾದ ಕಿರಣ್ ರೈ ಬಜಾಲ್, ಉಮೇಶ್ ಜಪ್ಪಿನಮೊಗರು, ಪ್ರದೀಪ್ ಪಂಪ್ವೆಲ್, ಪದ್ಮನಾಭ ನಾವೂರು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು