ಇತ್ತೀಚಿನ ಸುದ್ದಿ
ಡಿನೋಟಿಫಿಕೇಷನ್ ಪ್ರಕರಣ: ಯಡಿಯೂರಪ್ಪಗೆ ಬಿಗ್ ರಿಲೀಫ್: ತನಿಖೆಗೆ ಸೂಚಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ
22/07/2022, 23:26
ಹೊಸದಿಲ್ಲಿ(reporterkarnataka.com): ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಡಿನೋಟಿಫಿಕೇಷನ್ ಪ್ರಕರಣದ ತನಿಖೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಮೂಲಕ ಬಿಎಸ್ ವೈಗೆ ಬಿಗ್ ರಿಲೀಫ್ ದೊರೆತಿದೆ.
ಯಡಿಯೂರಪ್ಪ ಅವರ ವಿರುದ್ಧ 2006-07ರಲ್ಲಿ ನಡೆದಿದ್ದಂತ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಹೈಕೋರ್ಟ್ ತನಿಖೆ ನಡೆಸುವಂತೆ ಆದೇಶಿಸಿತ್ತು. ಈ ಆದೇಶ ಸಂಬಂಧ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣಕ್ಕೆ ತಡೆ ನೀಡುವಂತೆ ಸುಪ್ರೀಂ ಕೋರ್ಟ್ ನ್ಯಾಯಪೀಠವನ್ನು ಕೋರಿಕೊಂಡಿದ್ದರು.
ಇದೀಗ ಇಂದು ಈ ಸಂಬಂಧದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠವು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ 2006-07ರ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಹೈಕೋರ್ಟ್ ತನಿಖೆಗೆ ಆದೇಶಿಸಿದ್ದಕ್ಕೆ ತಡೆಯಾಜ್ಞೆ ನೀಡಿದೆ. ಈ ಮೂಲಕ ಬಿಎಸ್ ವೈಗೆ ಬಿಗ್ ರಿಲೀಫ್ ನೀಡಿದೆ.