11:25 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಕುದ್ರೋಳಿ ದೇಗುಲ ಮುಂಭಾಗದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಶಾಸಕ ವೇದವ್ಯಾಸ ಕಾಮತ್ ಸೂಚನೆ 

23/07/2022, 12:40

ಮಂಗಳೂರು(reporterkarnataka.com): ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಮುಂಭಾಗದ ರಸ್ತೆ ಉನ್ನತೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು,  ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಂಡು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ‌ಕಾಮತ್, 75 ಲಕ್ಷ ರೂಪಾಯಿ ವೆಚ್ಚದಲ್ಲಿ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಮುಂಭಾಗದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತಿದ್ದು ಕಾಮಗಾರಿಗೆ ಮತ್ತಷ್ಟು ವೇಗ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು ಅಂತಿಮ ಹಂತದ ಕೆಲವೊಂದು ಕೆಲಸ ಬಾಕಿಯುಳಿದಿದೆ ಎಂದು ಹೇಳಿದರು. 

ಈ ರಸ್ತೆಯಲ್ಲಿದ್ದ ಹಳೆಯದಾದ ಒಳಚರಂಡಿ ಕೊಳವೆಗಳನ್ನು ಬದಲಾಯಿಸಿ ಹೊಸದಾಗಿ ಒಳಚರಂಡಿ ಜಾಲ ರಚಿಸಲಾಗಿದೆ. 24×7 ಕುಡಿಯುವ ನೀರು ಪೂರೈಸುವ ಜಲಸಿರಿ ಯೋಜನೆಯ ಹಾಗೂ ಗೈಲ್ ಗ್ಯಾಸ್ ಸಂಪರ್ಕದ ಪ್ರಮುಖ ಕೊಳವೆಗಳ ಅಳವಡಿಕೆ ಪೂರ್ಣಗೊಳಿಸಿ ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ನಡೆಯುತ್ತಿದೆ. ಪಾದಾಚಾರಿ ರಸ್ತೆ ನಿರ್ಮಾಣ ಹಾಗೂ ರಸ್ತೆಯುದ್ದಕ್ಕೂ ದಾರಿದೀಪ ಅಳವಡಿಸಲು ಪ್ರತ್ಯೇಕವಾಗಿ ಅನುದಾನ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಯಶ್ರೀ ಕುಡ್ವ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರಾದ ರವಿ ಶಂಕರ್ ಮಿಜಾರ್, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಸಾಯಿರಾಮ್, ಬಿಜೆಪಿ ಮುಖಂಡರಾದ ರಮೇಶ್ ಹೆಗ್ಡೆ, ವಸಂತ್ ಜೆ ಪೂಜಾರಿ, ಅರುಣ್ ಶೇಟ್, ದಿನಕರ್ ಶೆಟ್ಟಿ, ಪ್ರವೀಣ್ ಕುದ್ರೋಳಿ, ಜನಾರ್ದನ ಕುಡ್ವ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು