10:03 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಕೇರಳ ಸಮುದ್ರದಲ್ಲಿ ಸಿಕ್ಕಿತು ತಿಮಿಂಗಿಲ ವಾಂತಿ!: ಇದರ ಬೆಲೆ ಬರೋಬ್ಬರಿ 28 ಕೋಟಿ!!

24/07/2022, 08:06

ತಿರುವನಂತಪುರ(reporterkarnataka.com) ಕೇರಳ ಸಮೀಪದ ವಿಝಿಂಜಂನಲ್ಲಿ ಮೀನುಗಾರರ ಗುಂಪು 28 ಕೋಟಿ ರೂಪಾಯಿ ಮೌಲ್ಯದ ತಿಮಿಂಗಿಲದ ಅಂಬರ್ ‌ಗ್ರಿಸ್ ಅಥವಾ ವಾಂತಿಯನ್ನು ಪತ್ತೆ ಮಾಡಿದೆ.

ತಿಮಿಂಗಿಲದ ಈ ವಾಂತಿ ಬರೋಬ್ಬರಿ 28 ಕೆಜಿ 400 ಗ್ರಾಂ ತೂಕವಿತ್ತು. ಮೀನುಗಾರರು ಸಮುದ್ರದ ದಡಕ್ಕೆ ಎಳೆದು ತಂದಿದ್ದಾರೆ. ಅದನ್ನು ಕೂಡಲೇ ಕರಾವಳಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಅಧಿಕಾರಿಗಳು ತಿಮಿಂಗಿಲ ಹೊರಹಾಕಿದ್ದನ್ನು ವಶಕ್ಕೆ ಪಡೆದಿದ್ದಾರೆ. ಅದು ತಿಮಿಂಗಿಲದ ವಾಂತಿ ಹೌದೋ ಅಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಲು ರಾಜೀವ್‌ ಗಾಂಧಿ ಸೆಂಟರ್‌ ಆಫ್‌ ಬಯಾಟೆಕ್ನಾಲಜಿಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ.

ತಿಮಿಂಗಿಲದ ವಾಂತಿಯನ್ನು ಸುಗಂಧ ದ್ರವ್ಯಗಳ ತಯಾರಿಕೆಗೆ ಬಳಸಲಾಗುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಕೆಜಿ ವಾಂತಿಯ ಬೆಲೆ ಬರೋಬ್ಬರಿ ಒಂದು ಕೋಟಿ ರೂಪಾಯಿ. ಆದ್ರೆ ಭಾರತದಲ್ಲಿ ತಿಮಿಂಗಿಲದ ವಾಂತಿಯನ್ನು ಖರೀದಿ ಅಥವಾ ಮಾರಾಟ ಮಾಡದಂತೆ ನಿಷೇಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು