9:54 PM Thursday15 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ಮಸ್ಕಿಯಲ್ಲಿ ಬಿಜೆಪಿ ವತಿಯಿಂದ 7ನೇ ವರ್ಷದ ವಿಶ್ವ ಯೋಗ ದಿನಾಚರಣೆ

21/06/2021, 23:28

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka.com

ಮಸ್ಕಿಯಲ್ಲಿ ಭಾರತೀಯ ಜನತಾ ಪಾರ್ಟಿ ಮಸ್ಕಿ ಮಂಡಲ ವತಿಯಿಂದ 7ನೇ ವರ್ಷದ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. 

ಇದೇ ಸಂದರ್ಭದಲ್ಲಿ ಯೋಗಗುರು ಆನಂದ್ ಪತ್ತರ ಜಿ.ಮತ್ತು ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ ಮಾತನಾಡಿ, ಯೋಗ ಮಾಡುವುದರಿಂದ ಮನಸಿಗೆ ನೆಮ್ಮದಿ, ತೃಪ್ತಿ ಸಿಗುತ್ತದೆ. ಹಾಗೇ ಜೀವನದಲ್ಲಿ ಬದಲಾವಣೆಗಳಾಗುತ್ತವೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜನಪ್ರಿಯ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಮಾತನಾಡಿದರು. ಪುರಾತನ ಕಾಲದಿಂದಲೂ ಭಾರತೀಯ ಪರಂಪರೆಯಲ್ಲಿ ಬೆರೆತು, ಬೆಳೆದ ಯೋಗ, ಜೀವನದ ಭಾಗವಾಗಿದ್ದ ಆರೋಗ್ಯ ಕಲೆ. ಇದು ಜಗತ್ತಿಗೆ ಭಾರತದ ಕೊಡುಗೆ. ದೇಹ ಮತ್ತು ಪ್ರಜ್ಞೆಯನ್ನೊಂದುಗೂಡಿಸಿ ಸದೃಢ ಆರೋಗ್ಯ ನೀಡುವ ಯೋಗವನ್ನು    ಭಾರತದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿಯವರು ಇಡೀ ವಿಶ್ವಕ್ಕೆ ಪರಿಚಯ ಮಾಡಿಸಿಕೊಟ್ಟರು  ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು, ಸಾರ್ಥಕ ಜೀವನವನ್ನು ನಡೆಸೋಣ ಎಂದು ಹೇಳಿದರು.

ಎಸ್ಸಿ ಮೊರ್ಚಾ ವತಿಯಿಂದ ಡಾ. ಸಿದ್ದಲಿಂಗಯ್ಯ ಯವರಿಗೆ  ಶದ್ಧಾಂಜಲಿಯನ್ನು ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಆಚರಿಸಲಾಯಿತ್ತು, 

ಕಾರ್ಯಕ್ರಮದಲ್ಲಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಶರಣಬಸವ ವಕೀಲರು ಉಮಲೂಟಿ,  ಮಸ್ಕಿ ಮಂಡಲ ಅದ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ, ಪ್ರಧಾನ ಕಾರ್ಯದರ್ಶಿ ಶರಣ ಬಸವ ಸೊಪ್ಪಿಮಠ, ಎಸ್ಸಿ ಮೋರ್ಚಾ ಅಧ್ಯಕ್ಷ ಮೌನೇಶ ಮುರಾರಿ, ಎಸ್ಸಿ ಮೋರ್ಚಾ ಪ್ರ.ಕಾರ್ಯದರ್ಶಿಯಾದ ಬಾಲಸ್ವಾಮಿ ಜಿನ್ನಾಪೂರು, ಮಲ್ಲಪ್ಪ ಗೋನಾಳ,

ರಾಮಕೃಷ್ಣ ಆಶ್ರಮದ ಸಿದ್ದು ಜಿ. ಮತ್ತು ಸುಖ ಮುನಿಯಪ್ಪ ನಾಯಕ ಪ್ರಕಾಶ ಧಾರಿವಾಲ್, ಮಂಡಲ ಪ್ರಧಾನ ಕಾರ್ಯದರ್ಶಿ ಶರಣಬಸವ ಸೊಪ್ಪಿಮಠ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು