ಇತ್ತೀಚಿನ ಸುದ್ದಿ
ಬೆಂಗಳೂರಿನಲ್ಲಿ ಶಂಕಿತ ಲಷ್ಕರ್ ಉಗ್ರ ಸೆರೆ: ಪತ್ನಿ, ಮಕ್ಕಳ ಜತೆ ವಾಸ; ಸಿಸಿಬಿ ಪೊಲೀಸರ ಕಾರ್ಯಾಚರಣೆ
25/07/2022, 15:19
ಬೆಂಗಳೂರು(reporterkarnataka.com):.ನಗರದ ತಿಲಕ್ ನಗರ ಪ್ರದೇಶದಲ್ಲಿ ವಾಸವಿದ್ದ ಶಂಕಿತ ಲಷ್ಕರ್ ಭಯೋತ್ಪಾದಕನನ್ನು ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ನಗರದ ತಿಲಕ್ ನಗರ ಪ್ರದೇಶದಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ.
ಶಂಕಿತ ಲಷ್ಕರ್ ಭಯೋತ್ಪಾದಕನನ್ನು ಅಖ್ತರ್ ಹುಸೇನ್ ಎಂದು ಗುರುತಿಸಲಾಗಿದ್ದು, ಅಸ್ಸಾಂನಲ್ಲಿ ಮೂಲದವನು ಎಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಸಿಸಿಬಿ ಪೊಲೀಸರು ಹುಸೇನ್ ವಾಸವಿದ್ದ ತಿಲಕ್‌ನಗರದ ಬಿಟಿಪಿ ಪ್ರದೇಶದ ಕಟ್ಟಡದ ಮೇಲೆ ದಾಳಿ ನಡೆಸಿದ್ದಾರೆ. ಆತ ಕೆಲವು ಯುವಕರೊಂದಿಗೆ ಕಟ್ಟಡದ ಮೂರನೇ ಮಹಡಿಯಲ್ಲಿ ವಾಸವಿದ್ದ ಎಂಬ ಮಾಹಿತಿ ಲಭ್ಯವಾಗಿದೆ.
ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಹುಸೇನ್‌ನನ್ನು ಬಂಧಿಸಿದ್ದಾರೆ. ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎಫ್‌ಐಆರ್ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ. ಕಳೆದ ತಿಂಗಳು, ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಬೆಂಗಳೂರಿನಲ್ಲಿಯೇ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ತಾಲಿಬ್ ಹುಸೇನ್ ನನ್ನು ಬಂಧಿಸಲಾಗಿತ್ತು. ಆತ ತನ್ನ ಪತ್ನಿ ಹಾಗೂ ಮೂವರು ಮಕ್ಕಳೊಂದಿಗೆ ನಗರದ ಓಕಳಿಪುರಂನಲ್ಲಿ ಕಳೆದ ಆರು ವರ್ಷಗಳಿಂದ ವಾಸವಾಗಿದ್ದ.