10:12 AM Sunday19 - January 2025
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಸಚಿವ ಚಲುವರಾಯಸ್ವಾಮಿ ಮನವಿ: ಕೇಂದ್ರ ಸಮ್ಮತಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಗ್ರಾಪಂ ಮಾಜಿ ಅಧ್ಯಕ್ಷರಿಂದ ಅಂತ್ಯ ಸಂಸ್ಕಾರ: ರಾತ್ರಿ… ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ… ಸಂಭ್ರಮ- ಸಡಗರಕ್ಕೆ ಸಾಕ್ಷಿಯಾದ ಕಡಲನಗರಿಯ ಮಂಗಳಾ ಕ್ರೀಡಾಂಗಣ: 4500 ಕ್ರೀಡಾಪಟುಗಳ ಪಾದಸ್ಪರ್ಶ ಎಷ್ಟಾದರೂ ಹಣ-ಸವಲತ್ತು ಕೇಳಿ ಕೊಡ್ತೀನಿ, ಆದರೆ ಒಲಂಪಿಕ್ ಮೆಡಲ್ ತನ್ನಿ: ಮಂಗಳೂರಿನಲ್ಲಿ ಸಿಎಂ… ಮಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಸಿಎಂ ಸಿದ್ದರಾಮಯ್ಯ… ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ… ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ…

ಇತ್ತೀಚಿನ ಸುದ್ದಿ

ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗದಿದ್ದರೆ ಶಿಸ್ತು ಕ್ರಮ: ಸರಕಾರಿ ಸಿಬ್ಬಂದಿಗಳಿಗೆ ಖಡಕ್ ಆದೇಶ

25/07/2022, 23:43

ಬೆಂಗಳೂರು(reporterkarnataka.com): ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗದ ನೌಕರರ ವಿರುದ್ಧ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿದ್ದು, ಶಿಸ್ತು ಕ್ರಮ ಕೈಗೊಳ್ಳಲು ಖಡಕ್ ಆದೇಶ ಹೊರಡಿಸಿದೆ.
ಈ ಕುರಿತು ಆದೇಶ ಹೊರಡಿಸಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ‘ಸರ್ಕಾರಿ ನೌಕರರ ಕಚೇರಿಗೆ ನಿಗದಿತ ಅವಧಿಗೆ ಅಂದರೆ ಬೆಳಗ್ಗೆ 10 ಗಂಟೆಗೆ ಕರ್ತವ್ಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು.

ಕಚೇರಿ ಅವಧಿ ಪೂರ್ಣವಾಗುವವರೆಗೆ ನಿಗದಿತ ಸ್ಥಾನದಲ್ಲಿರಬೇಕು. ಇನ್ನು ಕಚೇರಿಯ ಕೆಲಸದ ಮೇಲೆ ತೆರಳಿದ್ರೆ, ಅದಕ್ಕೆ ಕಾರಣವೇನು ಅನ್ನೋದನ್ನ ನಮೂದಿಸಿ ಅಧಿಕಾರಿಗಳು ಪೂರ್ವಾನುಮತಿ ಪಡೆದುಕೊಳ್ಳಬೇಕು’.

ಈ ನೌಕಕರು ತಡವಾಗಿ ಬಂದರೇ, ಕಚೇರಿಯಲ್ಲಿ ಸ್ವಸ್ಥಾನದಲ್ಲಿ ಇಲ್ಲದಿದ್ದರೆ, ಮೇಲಧಿಕಾರಿಗಳ ಅನುಮತಿ ಪಡೆಯದಿದ್ದರೆ ನೌಕರರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು