10:02 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಕೋವಿಡ್ ಸೋಂಕಿನಿಂದ ಕಾಪಾಡಿಕೊಳ್ಳಲು ಸಾಮಾಜಿಕ ಅಂತರ, ಸ್ವಚ್ಛತೆ, ಲಸಿಕೆಯೇ ಶ್ರೀರಕ್ಷೆ: ಶಾಸಕ ಕಾಮತ್

22/06/2021, 09:00

ಮಂಗಳೂರು(reporterkarnataka news): ಕೋವಿಡ್ ಸೋಂಕಿನಿಂದ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸಾಮಾಜಿಕ ಅಂತರ, ಸ್ವಚ್ಛತೆ ಹಾಗೂ ಲಸಿಕೆ ಪಡೆಯುವ ಮೂಲಕ ರಕ್ಷಣೆ ಪಡೆಯಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು. 

ಸಂಘ ನಿಕೇತನದಲ್ಲಿ ಹೆಲ್ಪಿಂಗ್ ಹ್ಯಾಂಡ್ ಫೌಂಡೇಶನ್ ವತಿಯಿಂದ ನಡೆದ ಮೊದಲ‌ ಹಂತದ ಉಚಿತ ಲಸಿಕೆ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಶಾಸಕ ಕಾಮತ್, ಅನೇಕ ಸೇವಾ ಸಂಸ್ಥೆಗಳು ಕೋವಿಡ್‌ ಸಂದರ್ಭದಲ್ಲಿ ಜನರಿಗೆ ಉಪಯುಕ್ತವಾಗುವ‌ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡು ಸಾಮಾಜಿಕ ಜವಬ್ದಾರಿಯನ್ನು ನಿಭಾಯಿಸಿದೆ. ಆಹಾರ ವಿತರಣೆ, ಮಾಸ್ಕ್, ಸ್ಯಾನಿಟೈಸರ್ ವಿತರಣೆ, ಔಷಧಿಗಳ ವಿತರಣೆ ಸೇರಿದಂತೆ ಜನರಿಗೆ ಸಹಕಾರಿಯಾಗುವ ಕೆಲಸದಲ್ಲಿ ಸೇವಾ‌ ಸಂಸ್ಥೆಗಳು ತೊಡಗಿಸಿಕೊಂಡಿವೆ. ಆ ಸಾಲಿನಲ್ಲಿ ಹೆಲ್ಪಿಂಗ್ ಹ್ಯಾಂಡ್ ಫೌಂಡೇಶನ್ ಸಂಸ್ಥೆಯ ಕೆಲಸ ಶ್ಲಾಘನೀಯ ಎಂದರು.

ಕೇಶವ ಸ್ಮೃತಿ ಸಂವರ್ಧನ ಸಮಿತಿಯ ಕಾರ್ಯದರ್ಶಿಗಳಾದ ರಘುವೀರ್ ಕಾಮತ್ ಮಾತನಾಡಿ, ಸಾಮಾಜಿಕ ಕಳಕಳಿಯುಳ್ಳ ಹೆಲ್ಪಿಂಗ್ ಹ್ಯಾಂಡ್ ಫೌಂಡೇಶನ್ ಸಂಸ್ಥೆಯ ಸದಸ್ಯರು ಆರ್ಥಿಕವಾಗಿ ಹಿಂದುಳಿದ ಜನರಿಗೆ ಉಚಿತ ಲಸಿಕೆ ವಿತರಿಸುವ ಮೂಲಕ ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ. ಅವರ ಕಾರ್ಯಕ್ಕೆ ಯಶಸ್ಸು ದಕ್ಕಲಿ ಎಂದು ಹಾರೈಸಿದರು.

ಬಳಿಕ ಮಾತನಾಡಿದ ಹೆಲ್ಪಿಂಗ್ ಹ್ಯಾಂಡ್ ಫೌಂಡೇಶನ್ ಅಧ್ಯಕ್ಷರಾದ ವರುಣ್ ರಾಜ್ ಅಂಬಟ್, ಕಳೆದ ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಒದಗಿಸುವ  ನಿಟ್ಟಿನಲ್ಲಿ ಹೆಲ್ಪಿಂಗ್ ಹ್ಯಾಂಡ್ಸ್ ಫೌಂಡೇಶನ್ ಸ್ಥಾಪಿಸಲಾಗಿತ್ತು. ಇಂದು ಸದಸ್ಯರ ಸಂಖ್ಯೆಯಲ್ಲಿಯೂ ಕೂಡ ಹೆಚ್ಚಳವಾಗಿದೆ. ಈ ಬಾರಿಯ ಲಾಕ್ ಡೌನ್ ಸಂದರ್ಭದಲ್ಲಿ ಜನರಿಗೆ ಊಟದ‌ ವ್ಯವಸ್ಥೆ ಸೇರಿದಂತೆ ಅನೇಕ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇವೆ. ಆ ನಿಟ್ಟಿನಲ್ಲಿ ಕೋವಿಡ್ ಲಸಿಕೆ ಖರೀದಿಸಿ ಆರ್ಥಿಕವಾಗಿ ಹಿಂದುಳಿದ ಜನರಿಗೆ ಉಚಿತವಾಗಿ ಹಂಚಲು ತೀರ್ಮಾನಿಸಲಾಗಿತ್ತು. ಇಂದು 210 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಹೇಳಿದರು. 

ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಸಂದೀಪ್ ಗರೋಡಿ, ಸ್ಥಳೀಯ ಮನಪಾ ಸದಸ್ಯರಾದ ಸಂಧ್ಯಾ ಮೋಹನ್ ಆಚಾರ್, ಅಡ್ವಕೇಟ್ ರಂಜಿನಿ ಕಾಮತ್ ಹಾಗೂ ಹೆಲ್ಪಿಂಗ್ ಹ್ಯಾಂಡ್ ಫೌಂಡೇಶನ್ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು