11:13 AM Thursday28 - May 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು…

ಇತ್ತೀಚಿನ ಸುದ್ದಿ

ಅತ್ಯಾಚಾರ ದೂರು ನೀಡಿದ ಕಾಂಗ್ರೆಸ್‌ ಯುವ ನಾಯಕಿ ನವ್ಯಶ್ರೀಗೆ ವೈದ್ಯಕೀಯ ಪರೀಕ್ಷೆ: ವಿಚಾರಣೆಗೆ ಠಾಣೆಗೂ ಹಾಜರು

26/07/2022, 14:12

ಬೆಳಗಾವಿ(reporterkarnataka.com): ಕಾಂಗ್ರೆಸ್‌ ಯುವ ನಾಯಕಿ ನವ್ಯಶ್ರೀ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ನಡುವಿನ ಆರೋಪ ಮತ್ತು ಪ್ರತ್ಯಾರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ನವ್ಯಶ್ರೀ ಅವರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ.

ಅದಲ್ಲದೆ ನವ್ಯಶ್ರೀ ಅವರು ಪೊಲೀಸ್‌ ಠಾಣೆಗೆ ಆಗಮಿಸಿ ವಿಚಾರಣೆಗೆ ಹಾಜರಾದರು.

ರಾಜಕುಮಾರ ಟಾಕಳೆ ವಿರುದ್ಧ ನವ್ಯಶ್ರೀ ನೀಡಿದ ದೂರಿನ ಸಂಬಂಧ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ಜುಲೈ 23ರಂದು ಅತ್ಯಾಚಾರ, ಕಿಡ್ನಾಪ್‌, ಗರ್ಭಪಾತ, ಹನಿಟ್ರ್ಯಾಪ್‌, ಜೀವಬೆದರಿಕೆ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಅತ್ಯಾಚಾರ, ಗರ್ಭಪಾತ ಪ್ರಕರಣ ಹಿನ್ನೆಲೆ ನವ್ಯಶ್ರೀಗೆ ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾಗಿದ್ದು, ಎರಡು ದಿನಗಳ ಕಾಲ ವೈದ್ಯಕೀಯ ಪರೀಕ್ಷೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. 

ಹಲ್ಲೆ ಮಾಡಿ ಬೆದರಿಕೆ, ಕಿಡ್ನಾಪ್‌ ಮಾಡಿದ ಆರೋಪ ಹಿನ್ನೆಲೆಯಲ್ಲಿ ನವ್ಯಶ್ರೀಯನ್ನು ಸ್ಥಳ ಮಹಜರುಗೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ.

ವಿಚಾರಣೆಗೆ ಹಾಜರಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನವ್ಯಶ್ರೀ , ರಾಜಕುಮಾರ ಟಾಕಳೆ ವಿರುದ್ಧ ದೂರು ನೀಡಿದ್ದು ಪೊಲೀಸರ ತನಿಖೆಗೆ ಸಹಕರಿಸಬೇಕಿದೆ. ಸತ್ಯವನ್ನು ಹೊರ ತರುತ್ತೇನೆ. ತೋಟಗಾರಿಕೆ ಇಲಾಖೆಯ ಅಧಿಕಾರಿ ರಾಜಕುಮಾರ ಟಾಕಳೆಯಿಂದ ನನಗೆ ಆದ ಅನ್ಯಾಯದ ವಿರುದ್ಧ ಈಗಾಗಲೇ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ಪೊಲೀಸರಿಗೆ ಸಹಕಾರ ನೀಡುವ ನಿಟ್ಟಿನಲ್ಲಿ ನಾನು ಬಂದಿದ್ದೇನೆ. ಸತ್ಯಾಸತ್ಯತೆ ಬಯಲಿಗೆ ತಂದು ರಾಜಕುಮಾರನಿಗೆ ಶಿಕ್ಷೆಯಾಗುವ ಹಾಗೆ ಮಾಡುತ್ತೇನೆ ಎಂದರು. 

ಪೊಲೀಸರು ಸ್ಥಳ ಮಹಜರ, ವೈದ್ಯಕೀಯ ತಪಾಸಣೆ ನಡೆಸಬೇಕಿದೆ. ಆದ್ದರಿಂದ ಈ ಪ್ರಕರಣದಲ್ಲಿ ನಾನು ಸಂಪೂರ್ಣ ತನಿಖೆಗೆ ಸಹಕಾರ ನೀಡುವೆ ಎಂದು ತಿಳಿಸಿದರು.

ನನ್ನ ವಿರುದ್ಧದ ಷಡ್ಯಂತ್ರದ ಹಿಂದೆ ಚೆನ್ನಪಟ್ಟಣದ ಮಹಾನಾಯಕ ಇದ್ದಾನೆ. ತಮ್ಮ ವಿರುದ್ಧದ ಬ್ಲಾಕ್ ಮೇಲ್ ಹಾಗೂ ವಂಚನೆ ಪ್ರಕರಣದ ಬಗ್ಗೆ ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ಪ್ರತಿಕ್ರಿಯಿಸಿದ್ದು, ಹೊಸ ಬಾಂಬ್ ಸಿಡಿಸಿದ್ದಾರೆ. ನವ್ಯಶ್ರೀ ಹಾಗೂ ತೋಟಗಾರಿಕೆ ಉಲಾಖೆಯ ಸಹಾಯಕ ನಿರ್ದೇಶಕ ರಾಜಕುಮಾರ್ ಟಾಕಳೆ ತಿಕ್ಕಾಟ ರಾಜಕೀಯ ಸ್ವರೂಪ ಪಡೆದುಕೊಂಡಿದೆ.  ನವ್ಯಶ್ರೀ ರಾಸಲೀಲೆ ವಿಡಿಯೋ ಹರಿಬಿಟ್ಟರುವುದರ ಹಿಂದೆ ಕಾಂಗ್ರೆಸ್ ಮಹಾನಾಯಕರೊಬ್ಬರ ಕೈವಾಡವಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಆದ್ರೆ, ನವ್ಯಶ್ರೀ ಆ ಮಹಾನಾಯಕನ ಹೆಸರು ಹೇಳಿಲ್ಲ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಈ ಬಗ್ಗೆ ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ನವ್ಯಶ್ರೀ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಹಾಗೂ ರಾಷ್ಟ್ರೀಯ ನಾಯಕರ ಜತೆ ಇರುವ ಫೋಟೋ ಇಟ್ಟುಕೊಂಡು ಅಪಪ್ರಚಾರ ಮಾಡಲಾಗುತ್ತಿದೆ. ರಾಜಕುಮಾರ್ ಟಾಕಳೆ ಹಾಗೂ ನನ್ನ ನಡುವಿನ ಕಿತ್ತಾಟದ ಹಿಂದೆ ಕಾಂಗ್ರೆಸ್ ನ ಮಹಾನಾಯಕರೊಬ್ಬರಿದ್ದಾರೆ. ಅವರು ಟಾಕಳೆಯನ್ನು ದಾಳವನ್ನಾಗಿ ಮಾಡಿಕೊಂಡು ಷಡ್ಯಂತ್ರ ನಡೆಸಿದ್ದಾರೆ ಎಂದು ಆರೋಪಿಸಿದರು. ಇದೆಲ್ಲದರ ಹಿಂದೆ ಇರುವವರು ಚೆನ್ನಪಟ್ಟಣದ ಕಾಂಗ್ರೆಸ್ ಮಹಾನಾಯಕ. ಅವರು ಮುಂದಿನ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗುವ ತವಕದಲ್ಲಿದ್ದಾರೆ.  ಅವರ ಜತೆ ಪತ್ರಿಕಾ ಸಂಪಾದಕರೊಬ್ಬರಿದ್ದಾರೆ. ಅವರ ಹೆಸರನ್ನು ನಾನು ಹೇಳಲ್ಲ. ತನಿಖೆ ಬಳಿಕ ಎಲ್ಲರ ಮುಖವಾಡ ಕಳಚಲಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು