4:18 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಮಾಜಿ ಸಿಎಂ ಸಿದ್ದರಾಮಯ್ಯ ‘ಅಮೃತ ಮಹೋತ್ಸವ’: 4 ಲಕ್ಷ ಮಂದಿಗೆ ಆಸನ, 5 ಲಕ್ಷ ಜನರಿಗೆ ಭೋಜನ!

26/07/2022, 14:45

ಬೆಂಗಳೂರು(reporterkarnataka.com):
ದಾವಣಗೆರೆಯ ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ಆಗಸ್ಟ್‌ 3ರಂದು ನಡೆಯಲಿರುವ ಸಿದ್ದರಾಮಯ್ಯ–75 ಅಮೃತ ಮಹೋತ್ಸವಕ್ಕೆ ಭರದ ಸಿದ್ಧತೆ ನಡೆಯುತ್ತಿದ್ದು, 5 ಲಕ್ಷ ಜನರಿಗೆ ಭೋಜನ ವ್ಯವಸ್ಥೆ ಮಾಡಲಾಗಿದೆ.

ಅಮೃತ ಮಹೋತ್ಸವ ಯಶಸ್ವಿಯ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನಿವಾಸದಲ್ಲಿ ಹಲವು ಸಭೆಗಳನ್ನು ನಡೆಸಲಾಗಿದೆ. ಅಮೃತ ಮಹೋತ್ಸವ ಸಮಿತಿ ಇವೆಲ್ಲದರ ಜವಾಬ್ದಾರಿ ವಹಿಸಿದೆ. ವಿವಿಧ ವ್ಯವಸ್ಥೆಗಳ ಹೊಣೆಯನ್ನು ಬೇರೆ, ಬೇರೆ ನಾಯಕರಿಗೆ ವಹಿಸಲಾಗಿದೆ.

ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗುತ್ತಿದ್ದು, 4 ಲಕ್ಷ ಮಂದಿಗೆ ಆಸನ ವ್ಯವಸ್ಥೆ ಕಲ್ಪಿಸಲು ಅಮೃತ ಮಹೋತ್ಸವ ಸಮಿತಿ ನಿರ್ಧರಿಸಿದೆ. ರಾಹುಲ್ ಗಾಂಧಿ ಮತ್ತಿತರ ಗಣ್ಯರು ಕಾರ್ಯಕ್ರಮಕ್ಕೆ ಬರಲು ಎರಡು ಹೆಲಿಪ್ಯಾಡ್‌ಗಳು ಸಿದ್ಧವಾಗುತ್ತಿದೆ. 5 ಲಕ್ಷ ಮಂದಿಗೆ ಪಲಾವ್, ಮೊಸರನ್ನ ಮತ್ತು ಸಿಹಿ ತಿಂಡಿಯ ಭೋಜನ ವ್ಯವಸ್ಥೆ, 6 ಲಕ್ಷ ಮಂದಿಗೆ ಕುಡಿಯುವ ನೀರಿನ ವ್ಯವಸ್ಥೆ, ಮಳೆ ಬಂದರೆ ಯಾವುದೇ ಸಮಸ್ಯೆ ಆಗದಂತೆ ಪೆಂಡಾಲ್ ವ್ಯವಸ್ಥೆ ಮಾಡಲಾಗುತ್ತಿದೆ. 

ಅಮೃತ ಮಹೋತ್ಸವದಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಮೊದಲು ಸಂಗೀತ ನಿರ್ದೇಶಕ ಹಂಸಲೇಖಾ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. 12 ಗಂಟೆಗೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ.

ಇದು 2 ತಾಸು ನಡೆಯಲಿದೆ. ಕಾರ್ಯಕ್ರಮದ ಸ್ಥಳದಲ್ಲಿ ಸಿದ್ದರಾಮಯ್ಯ ಅವರ ಕುರಿತಾದ ಛಾಯಾಚಿತ್ರ ಪ್ರದರ್ಶನ ನಡೆಯಲಿದೆ. ಹಿಂದಿನ ದಿನ (ಆ. 2ರ ರಾತ್ರಿ)  ಲೇಸರ್ ಶೋ, ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿದೆ ಎಂದು ಸಮಿತಿಯ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು