3:37 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಪ್ರವೀಣ್ ಕೊಲೆ ಪ್ರಕರಣ: 15 ಮಂದಿ ಪೊಲೀಸ್ ವಶಕ್ಕೆ: 1678 ನಂಬರ್‌ನ ಬೈಕ್‌ನಲ್ಲಿ ಬಂದಿದ್ರಾ ಹಂತಕರು?

27/07/2022, 13:31

ಮಂಗಳೂರು(reporterkarnataka.com): ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ 4 ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಈಗಾಗಲೇ ಪ್ರಕರಣ ಸಂಬಂಧ15 ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ.

ಪ್ರಕರಣ ಸಂಬಂಧಿಸಿದಂತೆ ಮೂರು ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ, ರಾಜಕೀಯ, ವೈಯುಕ್ತಿಕ ಹಾಗೂ ಕೋಮುದ್ವೇಷದ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ಜೊತೆಗೆ ಸಿಸಿಟಿವಿ, ಮೊಬೈಲ್ ಲೊಕೇಷನ್ ಆಧಾರದಲ್ಲಿ ತನಿಖೆ ನಡೆಯುತ್ತಿದೆ. 

ಇದೀಗ 15 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಅವರು ಕೊಲೆಗಾರರಿಗೆ ಸಹಾಯ ಮಾಡಿರುವ ಶಂಕೆಯಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಯುತ್ತಿದೆ. ಅವರಲ್ಲಿ ಹೆಚ್ಚಿನವರು ಸ್ಥಳೀಯರು ಎಂದು ಹೇಳಲಾಗುತ್ತಿದೆ.

ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿಲ್ಲ.ಪ್ರವೀಣ್ ನೆಟ್ಟಾರು ತಂದೆ ತಾಯಿಗೆ ಓಬ್ಬನೇ ಮಗ ನಾಲ್ಕು ವರ್ಷದ ಹಿಂದೆ ಮದುವೆಯಾಗಿತ್ತು. ಅಕ್ಷಯ್ ಫಾರ್ಮ್ ಫ್ರೆಶ್ ಚಿಕನ್ ಸೆಂಟರ್ ನಡೆಸುತ್ತಿದ್ದರು.ಬಿಜೆಪಿ ಕಾರ್ಯಕರ್ತನಾಗಿದ್ದ ಈತನ ವಿರುದ್ಧ ಯಾವುದೇ ಠಾಣೆಗಳಲ್ಲಿ ಪ್ರಕರಣಗಳಿಲ್ಲ.

ಬೈಕ್ ನಂಬರ್ 1678 ನಿನ್ನೆ ರಾತ್ರಿ 8.30ರ ಸಮಯ ಎಂದಿನಂತೆ ಕೋಳಿ ಅಂಗಡಿ ಮುಚ್ಚುತ್ತಿದ್ದ ವೇಳೆ ಅಲ್ಲಿಗೆ ಬಂದ ಕೇರಳ ನೋಂದಣಿಯ 1678 ಸಂಖ್ಯೆಯ ಪ್ಲೆಂಡರ್ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಹರಿತವಾದ ಆಯುಧದಿಂದ ತಲೆ ಹಾಗೂ ಕುತ್ತಿಗೆಗೆ ಹೊಡೆದಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಈ ವೇಳೆ ಸ್ವಲ್ಪ ದೂರದ ವರೆಗೆ ಪ್ರವೀಣ್ ಓಡಿಹೋಗಿ ಕುಸಿದು ಬಿದ್ದಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲಿದ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಲೇ ಗಂಭೀರ ಗಾಯಗೊಂಡಿದ್ದ ಪ್ರವೀಣ್ ಸಾವನ್ನಪ್ಪಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು