ಇತ್ತೀಚಿನ ಸುದ್ದಿ
ಹತ್ಯೆಗೀಡಾದ ಪ್ರವೀಣ್ ಮನೆಗೆ ಭೇಟಿ: ಮಂಗಳೂರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಆಗಮನ
28/07/2022, 18:05
ಮಂಗಳೂರು(reporterkarnataka.com): ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಆಗಮಿಸಿದರು.
ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ದ.ಕ. ಜಿಲ್ಲಾ ಉಸ್ತುವಾರಿ ಸಚಿ ಸುನೀಲ್ ಕುಮಾರ್, ಕೋಟಾ ಶ್ರೀನಿವಾಸ್ ಪೂಜಾರಿ, ಸಂಸದರಾದ ನಳೀನ್ ಕುಮಾರ್ ಕಟೀಲ್, ನಾಯಕರಾದ ಸಿ.ಟಿ ರವಿ, ಶಾಸಕರಾದ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಪೊಲೀಸ್ ಆಯುಕ್ತ ಶಶಿ ಕುಮಾರ್ ಹಾಗೂ ಇತರೆ ಜನ ಪ್ರತಿನಿಧಿಗಳು ಮತ್ತು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.