10:47 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಕೋಮುವಾದ ಪ್ರಕರಣ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪಿಸಿ ಶೀಘ್ರ ನ್ಯಾಯ ಕೊಡಿಸಿ: ನ್ಯಾಯವಾದಿ ಪದ್ಮರಾಜ್ 

28/07/2022, 20:26

ಮಂಗಳೂರು(reporterkarnataka.com): ರಾಜ್ಯ ಸರಕಾರಕ್ಕೆ ಇಚ್ಛಾಶಕ್ತಿಯಿದ್ದರೆ ಪ್ರವೀಣ್ ಕೊಲೆ ಪ್ರಕರಣ ಸೇರಿ ಸಮಾಜದಲ್ಲಿ ಶಾಂತಿ ಕದಡುವ ಕೋಮುವಾದದಂತಹ ಎಲ್ಲ ಪ್ರಕರಣಗಳನ್ನು ತ್ವರಿತ ನ್ಯಾಯಾಲಯ ಸ್ಥಾಪಿಸಿ 6 ತಿಂಗಳೊಳಗೆ ಇತ್ಯರ್ಥಗೊಳಿಸಿ ನೈಜ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕ್ರಮ‌ ಕೈಗೊಳ್ಳಲಿ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಬಿಲ್ಲವ ಮುಖಂಡ, ವಕೀಲ ಪದ್ಮರಾಜ್  ಆರ್. ಆಗ್ರಹಿಸಿದ್ದಾರೆ.

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ಸರ್ಕಾರದ ಭದ್ರತಾ ವೈಫಲ್ಯತೆ ಎದ್ದು ಕಾಣುತ್ತಿದೆ. ಕೆಲವು ದಿನಗಳ ಹಿಂದೆ, ಮಾಧ್ಯಮಗಳು ಪ್ರತೀಕಾರದ ಕೊಲೆ ನಡೆಯಬಹುದು ಎಂದು ಸಂಶಯ ವ್ಯಕ್ತಪಡಿಸಿ, ಸರ್ಕಾರವನ್ನು ಎಚ್ಚರಿಸಿದರೂ ಏನೂ ಕ್ರಮ ಕೈಗೊಳ್ಳದ ಗುಪ್ತಚರ ಇಲಾಖೆಯ ವಿಫಲತೆಗೆ ಸಾಕ್ಷಿಯಾಗಿದೆ ಎಂದು ಆರೋಪಿಸಿದ್ದಾರೆ.

ಯಾರದ್ದೋ ಸ್ವಾರ್ಥಕ್ಕಾಗಿ ಬಲಿಯಾಗುವವರು ಯಾವ ರಾಜಕಾರಣಿಯ ಮಗನೂ ಅಲ್ಲ. ಬಡಕುಟುಂಬದ ಯುವಕ. ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇದೀಗ ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಯಾರು ಜವಾಬ್ದಾರಿ? ಹೃದ್ರೋಗಪೀಡಿತ ಅಪ್ಪ, ವಯಸ್ಸಾದ ತಾಯಿ, ಮೂರು ವರ್ಷಗಳ ಹಿಂದೆ ಮದುವೆಯಾದ ಹೆಂಡತಿಗೆ ಆಧಾರಸ್ತಂಭವಾಗಿದ್ದ ಅವರ ನಿಧನದಿಂದ ಆ ಕುಟುಂಬ ಮತ್ತಷ್ಟು ಕಷ್ಟದ ಕೂಪಕ್ಕೆ ಹೋಗಿದೆ. ತಮ್ಮ ಸ್ವಾರ್ಥಕ್ಕಾಗಿ ದುಡಿಸಿಕೊಳ್ಳುವ ರಾಜಕಾರಣಿಗಳು ಪರಿಹಾರ ಘೋಷಣೆ ಮಾಡಬಹುದು. ಆದರೆ ಹೋದ ಪ್ರಾಣವನ್ನು ಮರಳಿ ಪಡೆಯಲು ಸಾಧ್ಯವೇ? ಒಂದು ಕೊಲೆಯಾದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎನ್ನುವ ರಾಗವೊಂದು ಬಿಟ್ಟರೆ, ಇಲ್ಲಿಯವರೆಗೆ ಏನು ಕ್ರಮ ಕೈಗೊಂಡಿದ್ದಾರೆ? ರಾಜಕೀಯ ಪಕ್ಷಗಳ ಇಚ್ಛಾಶಕ್ತಿಯ ಕೊರತೆಯಿಂದ ಇಂತಹ ಘಟನೆಗಳು ಮರುಕಳಿಸುತ್ತಿದ್ದು, ಶ್ರಮಜೀವಿಗಳ ಕುಟುಂಬದ ಮಕ್ಕಳೇ ಬಲಿಯಾಗುತ್ತಿದ್ದಾರೆ. ಒಂದು ವೇಳೆ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತಿದ್ದರೆ ಪ್ರವೀಣನಂತಹ ಸಹೃದಯಿಯನ್ನು ಕಳೆದುಕೊಳ್ಳುತ್ತಿರಲಿಲ್ಲ ಎಂದು ತಿಳಿಸಿದ್ದಾರೆ.

ಪ್ರವೀಣ್ ಕುಟುಂಬದ ದು‌ಃಖದ ಸಮಯದಲ್ಲಿ ಬಿಲ್ಲವ ಸಮಾಜ  ಸದಾ ಇರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು