6:56 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ದ.ಕ.: ವಿದ್ಯುತ್ ದರ ಏರಿಕೆ ವಿರುದ್ಧ ಚಿಮಿನಿ, ದೊಂದಿ, ಲಾಟೀನು ಪ್ರದರ್ಶಿಸಿ ಪ್ರತಿಭಟನೆ.

22/06/2021, 09:12

ಮಂಗಳೂರು(reporterkarnataka news); ರಾಜ್ಯ ಸರಕಾರ ಏರಿಕೆ ಮಾಡಿರುವ ವಿದ್ಯುತ್ ದರ ವಾಪಾಸ್ ಪಡೆಯಬೇಕು, ಲಾಕ್ ಡೌನ್ ಅವಧಿಯ ಮೂರು ತಿಂಗಳು ವಿದ್ಯುತ್ ಬಿಲ್ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ ಕರೆ ನೀಡಿದ್ದ ಗ್ರಾಮ, ಘಟಕ ಮಟ್ಟದ  ಚಿಮಿನಿ, ದೊಂದಿ, ಲಾಟೀನು ಪ್ರದರ್ಶನ, ಪ್ರತಿಭಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ನಡೆಯಿತು. 


ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲದಲ್ಲೂ ಕಾರ್ಯಕರ್ತರು ಚಿಮಣಿ, ದೊಂದಿ, ಲಾಟೀನು ಪ್ರದರ್ಶಿಸಿ ಪ್ರತಿಭಟನೆ, ಮೆರವಣಿಗೆ ನಡೆಸಿ ಸರಕಾರದ ಗಮನ ಸೆಳೆದರು.

ಮುನೀರ್ ಕಾಟಿಪಳ್ಳ, ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ಮನೋಜ್ ವಾಮಂಜೂರು, ಜೀವನ್ ರಾಜ್, ಅಶ್ರಫ್ ಕೆ ಸಿ ರೋಡ್, ನವೀನ್ ಕೊಂಚಾಡಿ, ಸಾದಿಕ್ ಕಣ್ಣೂರು, ನೌಷದ್ ಬೆಂಗ್ರೆ, ಚರಣ್ ಶೆಟ್ಟಿ ಪಂಜಿಮೊಗರು, ತುಳಸಿ ದಾಸ್ ವಿಟ್ಲ, ಸುನಿಲ್ ತೇವುಲ, ರಜಾಕ್ ಮುಡಿಪು ಮತ್ತಿತರ ನಾಯಕರು ವಿವಿಧೆಡೆಯ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು