6:07 AM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಬೆಳ್ಳಾರೆಗೆ ಪ್ರತಿಪಕ್ಷ ಉಪ ನಾಯಕ ಖಾದರ್ ಭೇಟಿ:  ಹತ್ಯೆಗೀಡಾದ ಮಸೂದ್, ಪ್ರವೀಣ್ ಕುಟುಂಬಕ್ಕೆ ಸಾಂತ್ವನ

29/07/2022, 22:02

ಬೆಳ್ಳಾರೆ(reporterkarnataka.com):
ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ  ಹತ್ಯೆಗೀಡಾದ ಮಸೂದ್ ಮನೆಗೆ ಭೇಟಿ
ನೀಡಿದ ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಹಾಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ ನೆಟ್ಟಾರು ಅವರ ಪತ್ನಿ ಮತ್ತು ಹೆತ್ತವರಿಗೆ ದೂರವಾಣಿ ಮೂಲಕ ಸಾಂತ್ವನ ತಿಳಿಸಿದರು.

ಬೆಂಗಳೂರಿನಿಂದ ಶುಕ್ರವಾರ ಮುಂಜಾನೆ ಮಂಗಳೂರಿಗೆ ಆಗಮಿಸಿದ ಯು.ಟಿ.ಖಾದರ್  ಅವರು ಕಳೆದ ವಾರ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಹತ್ಯೆಯಾಗಿದ್ದ ಮಸೂದ್  ಅವರ ಮನೆಗೆ ಹಾಗೂ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.


ಈ ಸಂದರ್ಭದಲ್ಲಿ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಇನ್ನೋರ್ವ ಪ್ರವೀಣ ನೆಟ್ಟಾರುರವರ ಮನೆಗೂ ಕೂಡಾ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಭೇಟಿ ನೀಡಬೇಕಿತ್ತಾದರೂ ಅವರ ಪತ್ನಿ ಮತ್ತು ಹೆತ್ತವರು ವಿಶ್ರಾಂತಿಯಲ್ಲಿರುವುದರಿಂದ ನೆಟ್ಟಾರು ಅವರ ಚಿಕ್ಕಪ್ಪ ವಿಶ್ವನಾಥ ಅವರಲ್ಲಿ ದೂರವಾಣಿ ಮೂಲಕ ಸಂಪರ್ಕಿಸಿ ಸಾಂತ್ವನ ತಿಳಿಸಿದರು. ಕಳೆದ ಎರಡು ದಿನಗಳಿಂದ ಸತತ ನಾಯಕರು ಇತರರ ಭೇಟಿಯಿಂದಾಗಿ ಪ್ರವೀಣ ನೆಟ್ಟಾರು ಅವರ ಪತ್ನಿ ಹಾಗೂ ಹೆತ್ತವರು ವಿಶ್ರಾಂತಿಯಲ್ಲಿದ್ದು ತಾವು ಕರೆ ಮಾಡಿ ಸಾಂತ್ವನ ತಿಳಿಸಿದ್ದು ಮನೆಗೆ ಭೇಟಿ ನೀಡಿದ್ದಷ್ಟೆ ತೃಪ್ತಿಯಾಯಿತೆಂದು  ಈ ಸಂದರ್ಭದಲ್ಲಿ ಪ್ರವೀಣ್  ಅವರ ಚಿಕ್ಕಪ್ಪ ವಿಶ್ವನಾಥ ಅವರು ಖಾದರ್ ರವರಿಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು