1:47 AM Friday19 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ನಿಗದಿತ ಸಮಯಕ್ಕೆ ಬಂದ್ ಮಾಡಿ: ಪಬ್, ಬಾರ್, ಮದ್ಯದಂಗಡಿಗಳಿಗೆ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಸೂಚನೆ

30/07/2022, 09:46

ಮಂಗಳೂರು/ಬೆಂಗಳೂರು(reporterkarnataka.com): ನಿಗದಿತ ಸಮಯಕ್ಕೆ ಬಂದ್ ಮಾಡುವಂತೆ ರಾಜ್ಯದಲ್ಲಿ ಪಬ್ , ಬಾರ್ ಮತ್ತು ಮದ್ಯದಂಗಡಿಗಳಿಗೆ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಆದೇಶ ಹೊರಡಿಸಿದ್ದಾರೆ.

ನಿಗದಿತ ಸಮಯದಲ್ಲಿ ಬಂದ್ ಮಾಡುವ ಜತೆಗೆ ಕೆಲವು ನಿಯಮವನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಮದ್ಯದಂಗಡಿಳಿಗೆ ಸೂಚನೆ ನೀಡಿದ್ದಾರೆ. 

ಅಪ್ರಾಪ್ತ ವಯಸ್ಕರು ಬಾರ್, ಪಬ್ ಹಾಗೂ ಮದ್ಯದಂಗಡಿಗಳಿಗೆ‌ ಹೋಗುವುದಕ್ಕೆ ನಿಷೇಧವಿದೆ.

ಬಾರ್, ಪಬ್, ಮದ್ಯದಂಗಡಿಗಳಿಗೆ ಅಪ್ರಾಪ್ತ ವಯಸ್ಕರು ಪ್ರವೇಶ ನೀಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು, ಮಾದಕ ದ್ರವ್ಯ ಸಾಗಣೆ ಮತ್ತು ಬಳಕೆ ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಜರುಗಿಸಬೇಕು ಎಂದು ಅವರು ತಿಳಿಸಿದ್ದಾರೆ.

ಅದೇ ರೀತಿ ಬಾರ್, ಪಬ್, ಮದ್ಯದಂಗಡಿಗಳ ಲೈಸನ್ಸ್‌ಗಳಲ್ಲಿ ನಿಗದಿಪಡಿಸಿದ ಸಮಯದಂತೆ ಕಡ್ಡಾಯವಾಗಿ ಅಂಗಡಿಗಳನ್ನು ಮುಚ್ಚಿಸಬೇಕು. ಸುಪ್ರೀಂಕೋರ್ಟ್ ಆದೇಶದಂತೆ ಪಬ್‌ಗಳಲ್ಲಿ ಅಳವಡಿಸಿರುವ ಧ್ವನಿವರ್ಧಕಗಳನ್ನು ರಾತ್ರಿ 10 ಗಂಟೆಯೊಳಗಾಗಿ ನಿಲ್ಲಿಸಿ ಶಬ್ದ ಮಾಲಿನ್ಯ ಉಂಟಾಗದಂತೆ ಕ್ರಮ ಜರುಗಿಸಬೇಕು ಎಂದು ಎಡಿಜಿಪಿ ಅಲೋಕ್ ಕುಮಾರ್ ಆದೇಶಿಸಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಹೊರತು ಪಡಿಸಿ ಉಳಿದ ಎಲ್ಲ ನಗರದ ಆಯುಕ್ತರಿಗೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದು. ಜುಲೈ 31ರೊಳಗೆ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು