5:22 AM Monday29 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಭದ್ರತಾ ವೈಫಲ್ಯ: ಗೃಹ ಸಚಿವರ ಮನೆಗೆ ಎಬಿವಿಪಿ  ಕಾರ್ಯಕರ್ತರ ಲಗ್ಗೆ; ಪ್ರತಿಭಟನೆ, ಲಾಠಿಚಾರ್ಜ್

30/07/2022, 16:02

ಬೆಂಗಳೂರು(reporterkarnataka.com):  ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಖಂಡಿಸಿ ಎಬಿವಿಪಿ ಕಾರ್ಯಕರ್ತರು ಜಯ ಮಹಲ್ ರಸ್ತೆಯಲ್ಲಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಪ್ರವೀಣ್ ಹತ್ಯೆ ಖಂಡಿಸಿ ಈಗಾಗಲೇ ಬಿಜೆಪಿ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದರು. ಇದೀಗ ಬಿಜೆಪಿಯ ಮತ್ತೊಂದು ಸಂಘಟನೆಯೇ ಸಿಡಿದೆದ್ದಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಗೃಹ ಇಲಾಖೆಯನ್ನು ನಿಭಾಯಿಸುವುದರಲ್ಲಿ ಆರಗ ಜ್ಞಾನೇಂದ್ರ ಅವರು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ಕಾರ್ಯಕರ್ತರು ಹಾಗೂ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ನಂತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ನಿಭಾಯಿಸುವಲ್ಲಿ ವಿಫಲರಾದ ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ಇದರ ಜೊತೆಗೆ ಎಸ್‍ಡಿಪಿಐ, ಪಿಎಫ್‍ಐ ನಿಷೇಧಿಸಬೇಕು ಎಂದು ಒತ್ತಾಯಿಸಿದ ಎಬಿವಿಪಿ ಕಾರ್ಯಕರ್ತರು ಅಸಮರ್ಥ ಸಿಎಂ ಬಸವರಾಜ ಬೊಮ್ಮಾಯಿ ಎಂದು ಘೋಷಣೆ ಕೂಗಿದ್ದಾರೆ. ಈ ಪ್ರತಿಭಟನೆ ಅತಿರೇಕಕ್ಕೆ ಹೋಗಿದ್ದು, ಎಬಿವಿಪಿ ಕಾರ್ಯಕರ್ತರು ಗೇಟ್ ಹಾರಿ ಗೃಹ ಸಚಿವರ ನಿವಾಸಕ್ಕೆ ನುಗ್ಗಿದ್ದಾರೆ.

ಈ ವೇಳೆ ಅಲ್ಲಿದ್ದ ಪೊಲೀಸರು ಎಬಿವಿಪಿ ಕಾರ್ಯಕರ್ತರನ್ನು ಬಾಗಿಲ ಬಳಿ ತಡೆದಿದ್ದಾರೆ. ಆದರೆ ಪೊಲೀಸರ ಮಾತಿಗೆ ಜಗ್ಗದ ಎಬಿವಿಪಿ ಕಾರ್ಯಕರರ್ತರು ಮನೆಯೊಳಗೆ ನುಗ್ಗಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿ, ವಿಬಿವಿಪಿ ಕಾರ್ಯಕರ್ತರನ್ನ ವಶಕ್ಕೆ ಪಡೆದಿದ್ದಾರೆ. ಸದ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಶಿವಮೊಗ್ಗ ಜಿಲ್ಲೆಯಲ್ಲಿ ಇದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು