2:23 PM Monday16 - February 2026
ಬ್ರೇಕಿಂಗ್ ನ್ಯೂಸ್
ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ…

ಇತ್ತೀಚಿನ ಸುದ್ದಿ

ಕಾರ್ಯಕರ್ತರ ಟ್ರೋಲ್, ಆಕ್ರೋಶಕ್ಕೆ ಮಣಿದು ಕೊನೆಗೂ ಪ್ರವೀಣ್ ಮನೆಗೆ ಭೇಟಿ ನೀಡಿದ ಡಿವಿಎಸ್! : ಕುಟುಂಬಕ್ಕೆ ಸಾಂತ್ವನ

30/07/2022, 18:48

ಸುಳ್ಯ(reporterkarnataka.com): ಹಿಂದೂ ಸಂಘಟನೆಗಳ ಕಾರ್ಯಕರ್ತರ ಒತ್ತಡ, ಆಕ್ರೋಶ, ಟ್ರೋಲಿಗೆ ಮಣಿದು ಮಾಜಿ ಮುಖ್ಯಮಂತ್ರಿ, ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಅವರು ಕೊನೆಗೂ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಶನಿವಾರ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು. 

ನಮ್ಮ ಸರಕಾರ ಅಧಿಕಾರಕ್ಕೆ ಬಂದ್ರೆ ನಮಗೆಲ್ಲ ರಕ್ಷಣೆ ಸಿಗುತ್ತದೆ ಎಂಬ ಭಾವನೆ ಕಾರ್ಯಕರ್ತರಲ್ಲಿ ಇತ್ತು. ಆದರೆ ಅದರಲ್ಲಿ ಸ್ವಲ್ಪ ಕೊರತೆಯಾಗಿದೆ ಎಂಬ ಭಾವನೆಯಿದೆ. ಇತ್ತೀಚೆಗೆ ನಡೆದ ಘಟನೆಗಳನ್ನು ಗಮನಿಸಿ ನಮ್ಮದೇ ಸರಕಾರ ಸ್ವಲ್ಪ ದಿಟ್ಟ ಹೆಜ್ಜೆಯನ್ನಿಡಬೇಕಿತ್ತು. ಅದಕ್ಕೆ ಬೇಕಾದ ವ್ಯವಸ್ಥೆ ಮಾಡುವಲ್ಲಿ ನಾವು ಹಿಂದೆ ಬಿದ್ದಿದನ್ನು ಒಪ್ಪಿಕೊಳ್ಳುತ್ತೇವೆ. ಇಂತಹ ಕೃತ್ಯ ತಡೆಗೆ ವಿಶೇಷ ಕಟ್ಟೆಚ್ಚರ ವಹಿಸಬೇಕಿದೆ. ಇತ್ತೀಚಿನ ದಿನದಲ್ಲಿ ಪೊಲೀಸರೆಂದರೆ ಭಯವೇ ಇಲ್ಲದಂತಾಗಿರುವುದು ಬೇಸರ ತರಿಸಿದೆ. ಪ್ರವೀಣ್‌ಗೆ ಬೆದರಿಕೆ ಬರುತ್ತಿತ್ತು. ಪೊಲೀಸರಿಗೆ ಹೇಳಿದ್ದರು, ಆದರೂ ಪೊಲೀಸರು ಕಾರ್ಯಚರಣೆ ನಡೆಸಿಲ್ಲ ಎಂಬ ವಿಚಾರ ತಿಳಿದು ಬಂದಿದೆ. ಇದು ಗಂಭೀರ ವಿಷಯವಾಗಿದೆ ಎಂದರು.

ಪ್ರವೀಣ್ ಹತ್ಯೆ ತನಿಖೆ ಎನ್‌ಐಎಗೆ ವಹಿಸುವ ಬಗ್ಗೆ ಮುಖ್ಯಮಂತ್ರಿಗಳು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಗೃಹ ಇಲಾಖೆ ಪರಿಶೀಲನೆ ನಡೆಸಿ ತನಿಖೆ ಕೈಗೆತ್ತಿಕೊಳ್ಳಲಿದ್ದಾರೆ. ನಾವು ಮಂಗಳವಾರ ಕರ್ನಾಟಕದ ಸಂಸದರು ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚಿಸಲಿದ್ದೇವೆ ಎಂದು ಸದಾನಂದ ಗೌಡರು ಹೇಳಿದರು.

ಕರ್ನಾಟಕಕ್ಕೆ ಬರುವ ಎನ್‌ಐಎ(ರಾಷ್ಟ್ರೀಯ ತನಿಖಾ ಸಳ) ಶಾಖೆಯನ್ನು ಮಂಗಳೂರಿನಲ್ಲಿ ಮಾಡಬೇಕೆಂಬ ಬೇಡಿಕೆ ಇದೆ. ಈಗಾಗಲೇ ಅದಕ್ಕೆ ಸಂಬಂಧಿಸಿದಂತೆ ಸ್ಥಳ ವೀಕ್ಷಣೆ ಕೂಡ ನಡೆಯುತ್ತಿದೆ. ಶೀಘ್ರ ಎನ್‌ಐಎ ಕೇಂದ್ರ ಆರಂಭಗೊಳ್ಳುವ ನಿರೀಕ್ಷೆ ಇದೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು