12:43 AM Sunday15 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಬಣಕಲ್ ಹೋಬಳಿಯ ಗ್ರಾಮಗಳಿಗೆ ಕೊನೆಗೂ ಬಂತು ಬಸ್!: ಸ್ವಾತಂತ್ರ್ಯ ಬಂದು 75 ವರ್ಷಗಳ ಬಳಿಕ ಸಾರಿಗೆ ಭಾಗ್ಯ!!

01/08/2022, 20:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸ್ವಾತಂತ್ರ್ಯ ಬಂದಾಗಿನಿಂದ ಬಸ್ಸನ್ನೇ ಕಾಣದ ಗ್ರಾಮ 75ನೇ ಸ್ವಾತಂತ್ರ್ಯ ದಿನಾಚರಣೆಯ ಹೊಸ್ತಿಲಲ್ಲಿ ಬಸ್ಸನ್ನ ಕಂಡಿರೋ ಸಂತಸದ ಸುದ್ದಿ ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಹೆಗ್ಗುಡ್ಲು, ಮತ್ತಿಕಟ್ಟೆ, ದೊಡ್ಡನಂದಿ ಸೇರಿದಂತೆ ನಾಲ್ಕೈದು ಗ್ರಾಮಗಳಿಗೆ ಬಸ್ ಸೌಲಭ್ಯವೇ ಇರಲಿಲ್ಲ. ಈ ಭಾಗದಲ್ಲಿ ಸುಮಾರು 250ಕ್ಕೂ ಹೆಚ್ಚು ಕುಟುಂಗಳು ವಾಸವಿವೆ. ಬಣಕಲ್ ಹೋಬಳಿಗೆ ಬರಲು ಈ ಗ್ರಾಮಗಳ ಜನ ಸುಮಾರು 5-7 ಕಿ.ಮೀ. ನಡೆದೇ ಬರಬೇಕಿತ್ತು. ಶಾಲಾ-ಕಾಲೇಜಿಗೆ ಹೋಗುವ ಮಕ್ಕಳು ಕೂಡ 5-7 ಕಿ.ಮೀ. ನಡೆದೇ ಬರಬೇಕಿತ್ತು.


ಇದೀಗ ಸ್ಥಳಿಯರ ದಶಕಗಳ ಮನವಿ ಮೇರೆಗೆ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಈ ಗ್ರಾಮಗಳಿಗೆ ಬಸ್ಸನ್ನ ಬಿಟ್ಟಿದ್ದಾರೆ. ದಿನಕ್ಕೆ ಎರಡು ಬಾರಿ ಓಡಾಡುವ ಬಸ್ಸು ಬೆಳಗ್ಗೆ-ಸಂಜೆ ಈ ಹಳ್ಳಿಗಳಿಗೆ ಹೋಗಿ ಬರಲಿದೆ. ಈ ಬಸ್ ಸ್ಥಳಿಯರ ಜೊತೆ ಹೆಚ್ಚಾಗಿ ಶಾಲಾ ಮಕ್ಕಳಿಗೆ ಅನುಕೂಲವಾಗಲಿದೆ. ಈ ಹಳ್ಳಿಗಳಿಗೆ ರಸ್ತೆ ಕೂಡ ಸರಿ ಇರಲಿಲ್ಲ. ಇದೀಗ ಎರಡು ಕೋಟಿ ವೆಚ್ಚದಲ್ಲಿ ರಸ್ತೆ ಕೂಡ ನಿರ್ಮಾಣವಾಗಿ, ಹಳ್ಳಿಗಳಿಗೆ ಬಸ್ ಸೌಲಭ್ಯ ಸಿಕ್ಕಿರೋದ್ರಿಂದ ಹಳ್ಳಿಗರು ಖುಷಿಪಟ್ಟಿದ್ದಾರೆ. ಇಂದು ಬಸ್ಸನ್ನ ಉದ್ಘಾಟಿಸಿದ ಶಾಸಕ ಕುಮಾರಸ್ವಾಮಿ ಅದೇ ಬಸ್ಸಿನಲ್ಲಿ ಮತ್ತಿಕಟ್ಟೆ ಗ್ರಾಮದಿಂದ ಬಣಕಲ್‍ವರೆಗೂ ಸ್ಥಳಿಯರ ಜೊತೆಯೇ ಸಂಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು