11:21 PM Sunday15 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರಿ ದುರಂತ: ಮನೆ ಮೇಲೆ ಗುಡ್ಡ ಕುಸಿತ;  ಇಬ್ಬರು ಮಕ್ಕಳು ಮಣ್ಣಿನಡ್ಡಿ ಸಿಲುಕಿದ ಶಂಕೆ

01/08/2022, 22:39

ಅಶೋಕ್ ಕಲ್ಲಡ್ಕ ಮಂಗಳೂರು

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ವರುಣನ ಆರ್ಭಟಕ್ಕೆ ಕುಮಾರಧಾರ ಬಳಿಯ ಪರ್ವತಮುಖಿ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಜರಿದು ಬಿದ್ದು, ಮನೆ ಸಂಪೂರ್ಣವಾಗಿ ನಾಶಗೊಂಡಿದ್ದು, ಮಣ್ಣಿನಡ್ಡಿ ಇಬ್ಬರು ಮಕ್ಕಳು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.


ಧಾರಾಕಾರ ಮಳೆಗೆ ಏಕಾಏಕಿ ಮನೆಯ ಹಿಂಬದಿಯ ಗುಡ್ಡ ಕುಸಿದು ಬಿದ್ದಿದೆ. ಗುಡ್ಡ ಕುಸಿತದ ವೇಳೆ ಒಂದು ಮಗುವಿನ ಜತೆ ತಾಯಿ
ಹೊರಗೆ ಓಡಿ ಬಂದಿದ್ದಾರೆ. ಇಬ್ಬರು ಮಕ್ಕಳು ಮನೆಯೊಳಗೆ ಓದುತ್ತಿರುವ ಕಾರಣ ಅವರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮಕ್ಕಳ ತಂದೆ ಕುಸುಮಾಧರ ಅವರು ಮನೆಯ ಪಕ್ಕದಲ್ಲೇ ಸಣ್ಣ ಗೂಡಂಗಡಿ ನಡೆಸುತ್ತಿದ್ದಾರೆ. ದುರಂತ ವೇಳೆ ಅವರು ಅಂಗಡಿಯಲ್ಲೇ ಇದ್ದರು ಎಂದು ತಿಳಿದು ಬಂದಿದೆ. ಜೇಸಿಬಿ ಮೂಲಕ ಮಣ್ಣಿನ ತೆರವು ಕಾರ್ಯಾಚರಣೆ ಆರಂಭವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು