2:07 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

3 ವರ್ಷ ಕಳೆದರೂ ಪುನರ್ವಸತಿ ಕಲ್ಪಿಸದ ಸರಕಾರ: ಸೂರಿನ ನಿರೀಕ್ಷೆಯಲ್ಲೇ ಕೊನೆಯುಸಿರೆಳೆದ ಮಹಾಮಳೆ ಸಂತ್ರಸ್ತ!!

01/08/2022, 22:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

2019ರ ಮಹಾಮಳೆಗೆ ಮನೆ ಜಮೀನು ಕಳೆದುಕೊಂಡ ನೆರೆ ಸಂತ್ರಸ್ತರೊಬ್ಬರು ಸ್ವಂತ ಸೂರಿನ ನಿರೀಕ್ಷೆಯಲ್ಲೆ ಕೊನೆಯುಸಿರೆಳಿದ್ದಾರೆ.

ಜಾವಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲೆಮನೆಯ ನೆರೆ ಸಂತ್ರಸ್ತ ನಾರಾಯಣಗೌಡ (65) 2019 ರಲ್ಲಿ ಸುರಿದ ಮಹಾಮಳೆಯಿಂದಾಗಿ ಮನೆ ಹಾಗೂ ಜಮೀನನ್ನು ಕಳೆದುಕೊಂಡಿದ್ದರು. ಮನೆಯೊಂದಿಗೆ ಮನೆಯಲ್ಲಿದ್ದ ವಸ್ತುಗಳು, ಚಿನ್ನಾಭರಣಗಳು, ದಾಖಲೆ ಪತ್ರಗಳು ಎಲ್ಲವನ್ನು ಕಳೆದುಕೊಂಡು ಅಕ್ಷರಶಃ ಬರಿಗೈನಲ್ಲಿ ಬೀದಿಗೆ ಬಿದ್ದಿದ್ದರು.

ಮೂಡಿಗೆರೆಯಲ್ಲಿ ಬಾಡಿಗೆ ಮನೆಯಲ್ಲಿ ಕುಟುಂಬದೊಂದಿಗೆ ವಾಸವಿದ್ದ ನಾರಾಯಣ ಗೌಡ ಅವರು ಸರ್ಕಾರ ಮನೆ ಕಟ್ಟಲು ಪರ್ಯಾಯ  ಜಾಗ ಹಾಗೂ ಪರ್ಯಾಯ ಕೃಷಿಭೂಮಿಯ ನಿರೀಕ್ಷೆಯಲ್ಲಿದ್ದರು. ಆದರೆ 3 ವರ್ಷ ಕಳೆದರೂ ಸರ್ಕಾರ ಪುನರ್ವಸತಿ ಕಲ್ಪಿಸದೇ ಇರುವುದರಿಂದ ಆ ಕೊರಗಿನಲ್ಲಿ ಜೀವನ ಸಾಗಿಸುತ್ತಿದ್ದರು.

2019 ರಲ್ಲಿ ತಲೆಮಾರುಗಳಿಂದ ಬದುಕಿದ್ದ ಮನೆ ಕೊಚ್ಚಿ ಹೋದಾಗ ಆಘಾತಕ್ಕೆ ಒಳಗಾಗಿ ಪಾಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದಿದ್ದರು. ಸ್ವಂತ ಮನೆಯ ನಿರೀಕ್ಷೆಯಲ್ಲಿಯೇ ನಾರಾಯಣ ಗೌಡ ಅವರು ಸೋಮವಾರ ಸಂಜೆ ಮೂಡಿಗೆರೆಯ ಬಾಡಿಗೆ ಮನೆಯಲ್ಲಿಯೇ ಮೃತಪಟ್ಟಿದ್ದಾರೆ. ಮೃತದೇಹವನ್ನು ಮಲೆಮನೆ ಗ್ರಾಮಕ್ಕೆ ತೆಗೆದುಕೊಂಡು ಹೋದರೂ ಅಂತಿಮ ದರ್ಶನಕ್ಕೆ ಮೃತದೇಹವನ್ನು ಇಡಲು ಮನೆಯೂ ಕೂಡ ಇಲ್ಲದಂತಾಗಿರುವುದು ನಿಜಕ್ಕೂ ವಿಪರ್ಯಾಸವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು