12:25 PM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಎನ್ ಡಿಆರ್ ಎಫ್ ತಂಡ ರವಾನೆ; ಭಕ್ತಾಧಿಗಳು ಭೇಟಿ ಮುಂದೂಡಲು  ಸಚಿವರ ಮನವಿ

01/08/2022, 23:30

ಸಾಂದರ್ಭಿಕಚಿತ್ರ
ಸುಬ್ರಹ್ಮಣ್ಯ(reporterkarnataka.com): ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಗುಡ್ಡ ಕುಸಿದು ಘೋರ ದುರಂತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಭಕ್ತಾದಿಗಳು ಮುಂದಿನ ಎರಡು ದಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಬಾರದು, ಮಳೆ ಕಡಿಮೆಯಾದ ಬಳಿಕ ಸಂದರ್ಶಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಮನವಿ ಮಾಡಿದ್ದಾರೆ.

ಸುಬ್ರಹ್ಮಣ್ಯ, ಕಲ್ಮಕಾರು, ಕೊಲ್ಲಮೊಗ್ರು, ಹರಿಹರ, ಬಾಳುಗೋಡು ಆಸುಪಾಸಿನ ಕಡೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.

ಈ ಭಾಗದಲ್ಲಿ ಮುಂಜಾಗ್ರತಾ ಕ್ರಮವಹಿಸಲು ಎಸ್ ಡಿಆರ್ ಎಫ್ ಹಾಗೂ ಎನ್ ಡಿಆರ್ ಎಫ್ ತಂಡವನ್ನು ಆ ಭಾಗಕ್ಕೆ ಈಗಾಗಲೆ ಕಳುಹಿಸಲಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳಿಗೂ ಕಟ್ಟೆಚ್ಚರ ವಹಿಸಿ ಮುಂಜಾಗ್ರತೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ. ನೆರೆ ಸಂದರ್ಭ ಸಾರ್ವಜನಿಕರು ಸಹಕರಿಸಿ, ಸುರಕ್ಷತೆ ಕಡೆ ಹೆಚ್ಚಿನ  ಗಮನಹರಿಸಬೇಕು ಎಂದು ಸಚಿವರು  ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು