1:28 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಡ್ರೋನ್ ದಾಳಿ: ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಅಲ್ ಖೈದಾ ನಾಯಕ ಅಯ್ಮನ್ ಅಲ್ ಜವಾಹಿರಿ ಹತ್ಯೆ

02/08/2022, 10:55

ಕಾಬೂಲ್(reporterkarnataka.com):
ಅಫ್ಘಾನಿಸ್ತಾನದಲ್ಲಿ ಸಿಐಎ ನಡೆಸಿದ ಡ್ರೋನ್ ದಾಳಿಯಲ್ಲಿ ಅಲ್ ಖೈದಾ ನಾಯಕ ಅಯ್ಮನ್ ಅಲ್-ಜವಾಹಿರಿ ಸಾವನ್ನಪ್ಪಿದ್ದಾನೆ.

ಟ್ವಿಟರ್‌ನಲ್ಲಿ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಅವರು ಸ್ಟ್ರೈಕ್ ನಡೆದಿರುವುದನ್ನು ದೃಢಪಡಿಸಿದ್ದಾರೆ. ಜುಲೈ 31 ರಂದು ಕಾಬೂಲ್ ನಗರದ ಶೆರ್ಪುರ್ ಪ್ರದೇಶದ ವಸತಿ ಗೃಹದ ಮೇಲೆ ವಾಯುದಾಳಿ ನಡೆಸಲಾಯಿತು ಎಂದು ಹೇಳಿದ್ದಾರೆ.

ಅಫ್ಘಾನಿಸ್ತಾನದ ಇಸ್ಲಾಮಿಕ್ ಎಮಿರೇಟ್ ಈ ದಾಳಿಯನ್ನು ಬಲವಾಗಿ ಖಂಡಿಸುತ್ತದೆ. ಇದು ಅಂತರರಾಷ್ಟ್ರೀಯ ತತ್ವಗಳು ಮತ್ತು ದೋಹಾ ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಮುಜಾಹಿದ್ ಹೇಳಿದರು.

ಅಧ್ಯಕ್ಷ ಜೋ ಬಿಡೆನ್ ಸೋಮವಾರ ಈ ಬಗ್ಗೆ ಘೋಷಿಸಿದ್ದು, ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬರಾಗಿದ್ದ ಮತ್ತು ಸೆಪ್ಟೆಂಬರ್ 11, 2001 ರ ದಾಳಿಯ ಶಂಕಿತ ಮಾಸ್ಟರ್ ಮೈಂಡ್ ಆಗಿದ್ದ ಅಲ್-ಖೈದಾ ಮುಖ್ಯಸ್ಥ ಅಯ್ಮನ್ ಅಲ್-ಜವಾಹಿರಿಯನ್ನು ಯುನೈಟೆಡ್ ಸ್ಟೇಟ್ಸ್ ಕೊಂದಿದೆ ಎಂದು ಹೇಳಿದ್ದಾರೆ.

ದೂರದರ್ಶನದ ಭಾಷಣದಲ್ಲಿ ಬಿಡೆನ್ ಅವರು, ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿ ಶನಿವಾರ ಸ್ಟ್ರೈಕ್ ನಡೆಸಲಾಯಿತು. ಯಾವುದೇ ನಾಗರಿಕ ಸಾವುನೋವುಗಳು ಸಂಭವಿಸಿಲ್ಲ. ಭಯೋತ್ಪಾದಕ ನಾಯಕ ಇನ್ನಿಲ್ಲ ಎಂದು ಹೇಳಿದರು.

ಅಲ್ ಖೈದಾ ನಾಯಕ ಅಯ್ಮಾನ್ ಅಲ್-ಜವಾಹಿರಿ ಹತ್ಯೆಯ ಕುರಿತು ಯುಎಸ್ ಅಧ್ಯಕ್ಷ ಜೋ ಬಿಡೆನ್ ಅವರ ಘೋಷಣೆಯನ್ನು ಸೌದಿ ಅರೇಬಿಯಾ ಸ್ವಾಗತಿಸಿದೆ ಎಂದು ವಿದೇಶಾಂಗ ಸಚಿವಾಲಯದ ಹೇಳಿಕೆಯನ್ನು ಉಲ್ಲೇಖಿಸಿ ಸ್ಟೇಟ್ ಸುದ್ದಿ ಸಂಸ್ಥೆ ಸೋಮವಾರ ತಡರಾತ್ರಿ ವರದಿ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು