5:29 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಸ್ಟ್ 4ರಂದು ರಾಜ್ಯಕ್ಕೆ? ಮಂಗಳೂರಿಗೂ ಭೇಟಿ ಸಾಧ್ಯತೆ

02/08/2022, 13:45

ಬೆಂಗಳೂರು(reporterkarnataka.com): ರಾಜ್ಯದಲ್ಲಿ ನಡೆದ ಕೆಲವು ವಿದ್ಯಮಾನಗಳ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಗಸ್ಟ್ 4ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಗಳ ಬಳಿಕ, ಬಿಜೆಪಿ ಕಾರ್ಯಕರ್ತರು ಪಕ್ಷದ ವಿರುದ್ಧವೇ ಸಿಡಿದೆದ್ದ ಹಿನ್ನಲೆಯಲ್ಲಿ ಅಮಿತ್ ಶಾ ರಾಜ್ಯಕ್ಕೆ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮಂಗಳೂರಿಗೂ ಭೇಟಿ ನೀಡುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ರಾಜ್ಯಕ್ಕೆ ಭೇಟಿ ನೀಡಲಿರುವ ಅಮಿತ್ ಶಾ ಅವರು ಸರಕಾರದ ನಡೆ ಹಾಗೂ ನಾಯಕರ ಕಾರ್ಯ ಚಟುವಟಿಕೆಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ .ಮಂಗಳವಾರ ಸಂಜೆಯೊಳಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮ ಅಧಿಕೃತವಾಗಿ ಘೋಷಣೆಯಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು