ಇತ್ತೀಚಿನ ಸುದ್ದಿ
ಕೇರಳದಲ್ಲಿ ಭಾರೀ ಮಳೆ: ಕಣ್ಣೂರು, ಕೊಟ್ಟಾಯಂ, ಇಡುಕ್ಕಿ ಜಿಲ್ಲೆಗಳಲ್ಲಿ ಭೂಕುಸಿತ; 14 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ
03/08/2022, 10:49
ಸಾಂದರ್ಭಿಕ ಚಿತ್ರ
ತಿರುವನಂತಪುರ(reporterkarnataka.com): ಕೇರಳ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನಗಳ ಕಾಲ 14 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಈಗಾಗಲೇ ಜನರು ತತ್ತರಿಸಿ ಹೋಗಿದ್ದಾರೆ. ಇದರಿಂದಾಗಿ 757 ಜನರನ್ನು 47 ತಾತ್ಕಾಲಿಕ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.
ಮೂರು ಕಣ್ಣೂರು, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಭೂಕುಸಿತದಲ್ಲಿವೆ. ತ್ರಿಶೂರ್ ನ ಚಾವಕ್ಕಾಡ್ ನಲ್ಲಿ ಇಬ್ಬರು ಮೀನುಗಾರರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.
ಇನ್ನು ಪ್ರವಾಸಿ ತಾಣಗಳನ್ನು ಮುಚ್ಚಲಾಗಿದೆ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದಾರೆ.ಮುನ್ನೆಚ್ಚರಿಕೆ ಕ್ರಮಗಳ ಭಾಗವಾಗಿ ಗುಡ್ಡಗಾಡು ಪ್ರದೇಶಗಳಿಗೆ ರಾತ್ರಿ ಪ್ರಯಾಣವನ್ನು ನಿರ್ಬಂಧಿಸಲಾಗಿದೆ.