10:27 PM Friday19 - December 2025
ಬ್ರೇಕಿಂಗ್ ನ್ಯೂಸ್
Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ

ಇತ್ತೀಚಿನ ಸುದ್ದಿ

ದಾವಣಗೆರೆ: ಇಂದು ಸಿದ್ದರಾಮೋತ್ಸವ; ಸಿದ್ದು ಬರ್ತ್‌ ಡೇಗೆ 8 ಲಕ್ಷ ಜನ ಆಗಮನ ನಿರೀಕ್ಷೆ

03/08/2022, 10:56

ದಾವಣಗೆರೆ(reporterkarnataka.com): ದಾವಣಗೆರೆಯ ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ಅದ್ದೂರಿ ಅಮೃತ ಮಹೋತ್ಸವ ಕಾರ್ಯಕ್ರಮ ಇಂದು ನಡೆಯಲಿದ್ದು, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಉದ್ಘಾಟಿಸಲಿದ್ದಾರೆ.

ರಾಜ್ಯ ಕಾಂಗ್ರೆಸ್‌ನ ಎಲ್ಲ ನಾಯಕರು ಇದರಲ್ಲಿ ಭಾಗವಹಿಸಲಿದ್ದು, ಸುಮಾರು 6 ರಿಂದ 8 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಅಮೃತ ಮಹೋತ್ಸವದ ಮೂಲಕ ಸಿದ್ದರಾಮಯ್ಯ ಸಿಎಂ ಅಭ್ಯರ್ಥಿ ಎಂದು ಅಧಿಕೃತವಾಗಿ ಬಿಂಬಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಏನೆಲ್ಲ ಸ್ಪೆಷಲ್‌:

* 08 ಲಕ್ಷ- ರಾಜ್ಯದ ವಿವಿಧ ಜಿಲ್ಲೆಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವವರು.

*06 ಲಕ್ಷ: ಮೈಸೂರು ಪಾಕ್‌ ತಯಾರಿ.

* 04 ಲಕ್ಷ: ಆಸನಗಳ ವ್ಯವಸ್ಥೆ.

* 35000- ದಾವಣಗೆರೆಗೆ ಆಗಮಿಸಲಿರುವ ಅಂದಾಜು ವಾಹನಗಳು.

*8000- ಅಭಿಮಾನಿಗಳನ್ನು ಕರೆತರುವ ಬಸ್‌ಗಳ ಸಂಖ್ಯೆ.

* 400: ಕೌಂಟರ್‌ಗಳಲ್ಲಿ ಬಫೆ ಊಟಕ್ಕೆ ವ್ಯವಸ್ಥೆ.

* 2500- ಬಾಣಸಿಗರಿಂದ ಮೊಸರನ್ನು-ಪಲಾವ್‌ ತಯಾರಿ.

* 300- ವೇದಿಕೆ ಆವರಣದಲ್ಲಿರುವ ಸ್ವಯಂ ಸೇವಕರು.

ಇಷ್ಟೇ ಅಲ್ಲ, 5 ಲಕ್ಷ ಮಂದಿಗೆ ಪಲಾವ್, ಮೊಸರನ್ನ ಹಾಗೂ ಸಿಹಿ ತಿಂಡಿಯ ಭೋಜನ ವ್ಯವಸ್ಥೆ, 6 ಲಕ್ಷ ಮಂದಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದ್ದು, ಮಳೆ ಬಂದರೆ ಸಮಸ್ಯೆ ಆಗದಂತೆ ಪೆಂಡಾಲ್ ವ್ಯವಸ್ಥೆ ಕೂಡ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು