10:31 PM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಸುಬ್ರಹ್ಮಣ್ಯ: ಜಲಸ್ಫೋಟದಿಂದ ಹಾನಿಗೀಡಾದ ಪ್ರದೇಶದಲ್ಲಿ ಎನ್ನೆಸ್ಸೆಸ್ ಸೇವಾ ಕಾರ್ಯ

03/08/2022, 15:29

ಸುಬ್ರಹ್ಮಣ್ಯ(reporterkarnataka.com):ಕುಕ್ಕೆ ಸುಬ್ರಮಣ್ಯದಲ್ಲಿ ಜಲಸ್ಫೋಟ ಹಾಗೂ ಗುಡ್ಡ ಕುಸಿತದಿಂದ ಹಾನಿಗೀಡಾದ ಪ್ರದೇಶದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಕುಕ್ಕೆ ಸುಬ್ರಮಣ್ಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಸೇವಾ ಕಾರ್ಯ ನಡೆಸಿದರು. ಸುಮಾರು 30 ಮಂದಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ.


ಹಾನಿಗೊಳಗಾದ  ಕೊಲ್ಲಮೊಗರು, ಬಾಲುಗೋಡು ಗುರ್ತಿಲ, ಹರಿಹರ ಪ್ರದೇಶಗಳ ಮನೆಗಳ ತಡೆಗೋಡೆಗಳ ದುರಸ್ತಿ ಕಾರ್ಯ ನಡೆಸಲಾಗುತ್ತಿದೆ.


ಜಲಸ್ಫೋಟ ಹಾಗೂ ಗುಡ್ಡ ಕುಸಿತದಿಂದ ಮನೆಯೊಳಗೆ ಸೇರಿದ ಮಣ್ಣು, ಕಲ್ಲು,ತ್ಯಾಜ್ಯಗಳನ್ನು ಚರಂಡಿ ಸ್ವಚ್ಛತೆಯ ಕಾರ್ಯದಲ್ಲಿ ವಿದ್ಯಾರ್ಥಿಗಳು ತೊಡಗಿಕೊಂಡಿದ್ದಾರೆ. ಎಂದು ಕುಕ್ಕೆ ಸುಬ್ರಮಣ್ಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿ ಆರತಿ ಮಾಹಿತಿ ನೀಡಿದ್ದಾರೆ.
ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳ ಸೇವೆಯನ್ನು ಸ್ಥಳೀಯರು ಶ್ಲಾಘಿಸಿದ್ದಾರೆ.

ಈ ಬಗ್ಗೆ ರಿಪೋಟರ್ ಕರ್ನಾಟಕಕ್ಕೆ ಪ್ರತಿಕ್ರಿಸಿಸಿದ,
ಮಂಗಳೂರು ವಿಶ್ವ ವಿದ್ಯಾನಿಲಯದ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ.
ಈ ರೀತಿ ಪ್ರಕೃತಿ ವಿಕೋಪ ನಡೆಯಬಾರದು.ವಿಕೋಪಕ್ಕೆ ತುರ್ತಾದ ಜನರ ಪರಿಸ್ಥಿತಿ ಶೋಚನೀಯ. ಮಂಗಳೂರು ವಿಶ್ವ ವಿದ್ಯಾನಿಲಯದ ಕುಕ್ಕೆ ಸುಬ್ರಮಣ್ಯ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾಯೋಜನೆ ಸ್ವಯಂ ಸೇವಕರಿಗೆ,ಹಾಗೂ ಯೋಜನಾಧಿಕಾರಿ ಆರತಿಯ ಸೇವಾ ಕಾರ್ಯ ಮೆಚ್ಚುವಂತಹದು..

ಇತ್ತೀಚಿನ ಸುದ್ದಿ

ಜಾಹೀರಾತು