12:11 PM Tuesday29 - July 2025
ಬ್ರೇಕಿಂಗ್ ನ್ಯೂಸ್
Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ…

ಇತ್ತೀಚಿನ ಸುದ್ದಿ

ಪ್ರವೀಣ್ ಹತ್ಯೆ ಪ್ರಕರಣ: ಎನ್ಐಎ ತನಿಖೆ ಆರಂಭ; ಮಂಗಳೂರು, ಕೇರಳದಲ್ಲಿ ಮಾಹಿತಿ ಸಂಗ್ರಹ

04/08/2022, 13:54


ಮಂಗಳೂರು(reporterkarnataka.com)

ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಪ್ರಾಥಮಿಕ ತನಿಖೆ ಆರಂಭಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹಾಗೂ ಮಂಗಳೂರಿನಲ್ಲಿ ಎನ್‌ಐಎ ಅಧಿಕಾರಿಗಳ ತಂಡ ಮಾಹಿತಿ ಸಂಗ್ರಹಿಸಿದೆ. 

ಆರೋಪಿಗಳಿಗೆ ಪಿಎಫ್‌ಐ ಸೇರಿದಂತೆ ಯಾವುದಾದರೂ ಪ್ರಮುಖ ಸಂಘಟನೆಗಳ ಜತೆ ನಂಟು ಇದೆಯೇ ಎಂಬ ಕುರಿತು ಎನ್‌ಐಎ ಮಾಹಿತಿ ಕಲೆ ಹಾಕುತ್ತಿದೆ. ವಿವಿಧ ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಶೀಘ್ರದಲ್ಲೇ ಪ್ರಮುಖ ಹಂತಕರು ಬಂಧನಕ್ಕೊಳಗಾಗುವ ಸಾಧ್ಯತೆಯಿದೆ ಎಂದು ರಿಪೋರ್ಟರ್ ಕರ್ನಾಟಕಕ್ಕೆ ಮಾಹಿತಿ ಲಭಿಸಿದೆ.

ಈಗಾಗಲೇ ಬಂಧಿತರಾಗಿರುವ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಒಬ್ಬ ಆರೋಪಿಗೆ ಪೊಲೀಸ್ ಕಸ್ಟಡಿ ಅವಧಿಯನ್ನು 5 ದಿನ ವಿಸ್ತರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರಂಭದಲ್ಲಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳಾದ ಸವಣೂರಿನ ಝಾಕಿರ್ ಮತ್ತು ಬೆಳ್ಳಾರೆ ಪೇಟೆ ನಿವಾಸಿ ಶಫೀಕ್‌ನನ್ನು ಆ.2ರಂದು ಸಂಜೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಬೆಳ್ಳಾರೆ ಪೊಲೀಸರು ಆರೋಪಿ ಶಫೀಕ್‌ ನ್ನು ಮತ್ತೆ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಝಾಕಿರ್ ಮತ್ತು ಆ.2ರಂದು ಬಂಧಿತರಾಗಿರುವ ಬೆಳ್ಳಾರೆ ಪಲ್ಲಿಮಜಲು ನಿವಾಸಿಗಳಾದ ಸದ್ದಾಂ(32) ಮತ್ತು ಹಾರಿಸ್(42)ಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಆರಂಭದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗಳಾದ ಶಫೀಕ್ ಮತ್ತು ಜಾಕೀರ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದರು. ಈ ಅವಧಿಯಲ್ಲಿ ಆರೋಪಿಗಳು ವಿಚಾರಣೆ ವೇಳೆ ನೀಡಿದ್ದ ಮಾಹಿತಿಯಾಧರಿಸಿ ತನಿಖೆ ಮುಂದುವರಿಸಿದ್ದ ಪೊಲೀಸರು ಬೆಳ್ಳಾರೆ ಪಳ್ಳಿಮಜಲು ನಿವಾಸಿಗಳಾದ ಸದ್ದಾಂ ಮತ್ತು ಹ್ಯಾರೀಸ್‌ರನ್ನು ಬಂಧಿಸಿದ್ದರು. ಪೊಲೀಸ್ ಕಸ್ಟಡಿಯ ಅವಧಿ ಮುಕ್ತಾಯಗೊಂಡಿದ್ದ ಹಿನ್ನೆಲೆಯಲ್ಲಿ ಶಫೀಕ್ ಮತ್ತು ಝಾಕಿರ್‌ರನ್ನು ಆ.2ರಂದು ಹಾಜರುಪಡಿಸಲಾಗಿತ್ತು.

ಮತ್ತೆ ಪೊಲೀಸ್ ಕಸ್ಟಡಿಗೆ: ಕೃತ್ಯ ನಡೆದು ವಾರ ಕಳೆದರೂ ಆರೋಪಿಗಳು ಇನ್ನೂ ಬಂಧನವಾಗದೇ ಇರುವ ಹಿನ್ನೆಲೆಯಲ್ಲಿ ಬಂಧಿತ ಆರೋಪಿ ಶಫೀಕ್‌ನನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಮತ್ತೆ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಎರಡನೇ ಬಾರಿ ಆರೋಪಿಯನ್ನು ಪೊಲೀಸರ ಕಸ್ಟಡಿಗೆ ನೀಡುವುದಕ್ಕೆ ಆರೋಪಿ ಪರ ವಕೀಲರು ಪ್ರಬಲವಾಗಿ ಆಕ್ಷೇಪಿಸಿದರು. ಆದರೆ, ಪ್ರಮುಖ ಆರೋಪಿಗಳ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಳ್ಳುವುದು ಸೇರಿದಂತೆ ಇನ್ನಷ್ಟು ವಿಚಾರಣೆ ನಡೆಸಬೇಕಾದ ಅಗತ್ಯವಿರುವುದರಿಂದ ಆರೋಪಿ ಶಫೀಕ್‌ ಪೊಲೀಸ್ ಕಸ್ಟಡಿ ಅವಧಿಯನ್ನು ವಿಸ್ತರಿಸುವಂತೆ ಪೊಲೀಸರ ಪರ ಸಹಾಯಕ ಸರಕಾರಿ ಅಭಿಯೋಜಕರು ಮಾಡಿದ್ದ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ ಆರೋಪಿ ಶಫೀಕ್‌ನನ್ನು ಆ.2ರಿಂದ ಮತ್ತೆ 5 ದಿನಗಳ ಅವಧಿಗೆ ಪೊಲೀಸರ ಕಸ್ಟಡಿಗೆ ನೀಡಿ ಆದೇಶಿಸಿದೆ.

ಪ್ರಮುಖ ಆರೋಪಿಗಳು ನಾಪತ್ತೆ: ಜು.26ರಂದು ರಾತ್ರಿ ಪ್ರವೀಣ್ ಅವರ ಹತ್ಯೆ ನಡೆದಿದೆ. ಘಟನೆ ನಡೆದು ವಾರ ಕಳೆದರೂ ಇನ್ನೂ ಪ್ರಮುಖ ಆರೋಪಿಗಳ ಬಂಧನವಾಗಿಲ್ಲ. ಪ್ರಮುಖ ಆರೋಪಿಗಳ ಕುರಿತು ಪೊಲೀಸರಿಗೆ ಮಹತ್ವದ ಮಾಹಿತಿ ಲಭಿಸಿರುವುದಾಗಿ ಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿಕೊಂಡಿದ್ದರೂ ಇನ್ನೂ ಪ್ರಮುಖ ಆರೋಪಿಗಳ ಬಂಧನವಾಗಿಲ್ಲ. ಆ.5ರೊಳಗೆ ನೈಜ ಆರೋಪಿಗಳ ಬಂಧನವಾಗದೇ ಇದ್ದಲ್ಲಿ ತಾನೇ ಖುದ್ದು ಬಂದು ದ.ಕ.ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸುವುದಾಗಿ ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ. ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

…..

ಇತ್ತೀಚಿನ ಸುದ್ದಿ

ಜಾಹೀರಾತು