ಇತ್ತೀಚಿನ ಸುದ್ದಿ
ದ.ಕ.: ಬೈಕ್‌ನಲ್ಲಿ ಡಬಲ್ ರೈಡಿಗೆ ನಾಳೆ ಯಿಂದ ಅವಕಾಶವಿಲ್ಲ: ಎಡಿಜಿಪಿ ಅಲೋಕ್ ಕುಮಾರ್ ಆದೇಶ
04/08/2022, 14:51
ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ವಿದ್ಯಮಾನಗಳ ಹಿನ್ನೆಲೆಯಲ್ಲಿ ಮಂಗಳೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ನಿರಾಕರಿಸಲಾಗಿದೆ.
ಎಡಿಜಿಪಿ ಅಲೋಕ್ ಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಹೊಸ ನಿಯಮ ಜಾರಿಯಾಗಲಿದ್ದು ಕೆಲವು ಬಾರಿ ಹಿಂಬದಿ ಸವಾರರಿಂದ ತೊಂದರೆ ಉಂಟಾಗುವ ಸಾಧ್ಯತೆ ಇರುವ ಕಾರಣಕ್ಕೆ ನಾಳೆ ಯಿಂದ ಸಂಜೆ 6 ರಿಂದ 1 ವಾರ ನಿಯಮ ಅನುಷ್ಠಾನವಾಗಲಿದೆ ಎಂದು ಅಲೋಕ್ ಕುಮಾರ್ ಸೂಚನೆ ಹೊರಡಿಸಿದ್ದಾರೆ.
18 ವರ್ಷದೊಳಗಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆ ರಿಯಾಯಿತಿ ಇರಲಿದ್ದು ಕೇವಲ ಪುರುಷ ಹಿಂಬದಿ ಸವಾರರಿಗೆ ಮಾತ್ರ ಈ ನಿಯಮ ಅನ್ವಯವಾಗುತ್ತದೆ ಎಂದು ಹೇಳಿದ್ದಾರೆ.
ಬೇರೆ ರಾಜ್ಯದಲ್ಲೂ ಈ ನಿಯಮ ಜಾರಿಯಲ್ಲಿತ್ತು. ಆಗ ಎಲ್ಲಾ ಪುರುಷ ಹಿಂಬದಿ ಸವಾರರಿಗೆ ದ್ವಿಚಕ್ರ ವಾಹನದಲ್ಲಿ ಸಂಚರಿಸಲು ಅವಕಾಶ ನಿರಾಕರಿಸಲಾಗಿತ್ತು ಎಂದು ಹೇಳಿದ್ದಾರೆ.