7:05 AM Wednesday8 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಭಾಗಮಂಡಲ-ಕರಿಕೆ ರಸ್ತೆಯಲ್ಲಿ ಭಾರೀ ಭೂಕುಸಿತ: ಸಂಚಾರ ಸಂಪೂರ್ಣ ‌ಸ್ಥಗಿತ

04/08/2022, 15:37

ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯಲ್ಲಿ ಮಳೆಯ ತೀವ್ರತೆ ಕಡಿಮೆಯಾದರೂ

ಅಲ್ಲಲ್ಲಿ ಭೂಕುಸಿತ, ಮರಗಳು ಧರೆಗುರುಳಿದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಬುಧವಾರ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಭಾಗಮಂಡಲ-ಕರಿಕೆ ರಸ್ತೆಯಲ್ಲಿ ಅಲ್ಲಲ್ಲಿ ಭೂ ಕುಸಿತ ಉಂಟಾಗಿದೆ.

ಮಡಿಕೇರಿಯಿಂದ ಭಾಗಮಂಡಲ-ಕರಿಕೆ-ಪಾಣತ್ತೂರು ಮಾರ್ಗವಾಗಿ ಕೇರಳದ ಕಾಂಞಂಗಾಡ್, ಕಾಸರಗೋಡುವಿಗೆ ತೆರಳುವವರಿಗೆ ಈ‌ ಮಾರ್ಗ ಸಮೀಪವಾಗಿದೆ. ಆದರೆ ಇದೀಗ ಭಾಗಮಂಡಲ ಕರಿಕೆ ರಸ್ತೆಯ ಕೊಟ್ಟಮಲೆ ಹಾಗೂ ಬಾಚಿಮಲೆಯಲ್ಲಿ ಕುಸಿತ ಉಂಟಾಗಿ‌ ಭಾರೀ ಪ್ರಮಾಣದ ಮಣ್ಣು ರಸ್ತೆಗೆ ಬಿದ್ದಿರುವುದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.

ಮಳೆಯ ನಡುವೆಯೂ ಎರಡು ಜೆಸಿಬಿ ಯಂತ್ರಗಳನ್ನು ಬಳಸಿ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಆದರೆ‌ ಮತ್ತೆ ಮತ್ತೆ‌ ಬೆಟ್ಟದಿಂದ ಮಣ್ಣು ಹಾಗೂ ಕಲ್ಲು ರಸ್ತೆಗೆ ಜಾರುತ್ತಿದ್ದು, ತೆರವು ಕಾರ್ಯಾಚರಣೆಗೆ ಸವಾಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 36.26 ಮಿ.ಮೀ. ಮಳೆಯಾಗಿದೆ.

ಮಡಿಕೇರಿ ತಾಲೂಕಿನಲ್ಲಿ ಸರಾಸರಿ 89.73 ಮಿ.ಮೀ., ವೀರಾಜಪೇಟೆ ತಾಲೂಕಿನಲ್ಲಿ 8.25 ಮಿ.ಮೀ. ಹಾಗೂ ಸೋಮವಾರಪೇಟೆ ತಾಲೂಕಿನಲ್ಲಿ 10.80 ಮಿ.ಮೀ.ಮಳೆ ದಾಖಲಾಗಿದೆ.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರದನ್ವಯ ಮಡಿಕೇರಿ ಕಸಬಾ 35.40, ನಾಪೋಕ್ಲು 120.40, ಸಂಪಾಜೆ 105.50, ಭಾಗಮಂಡಲ 97.60, ವೀರಾಜಪೇಟೆ ಕಸಬಾ 7.20, ಹುದಿಕೇರಿ 10, ಶ್ರೀಮಂಗಲ 10.80, ಪೊನ್ನಂಪೇಟೆ 2, ಅಮ್ಮತ್ತಿ 4.50, ಬಾಳೆಲೆ 15, ಸೋಮವಾರಪೇಟೆ ಕಸಬಾ 17.20, ಶನಿವಾರಸಂತೆ 9.40, ಶಾಂತಳ್ಳಿ 8, ಕೊಡ್ಲಿಪೇಟೆ 9, ಕುಶಾಲನಗರ 14, ಸುಂಟಿಕೊಪ್ಪ 7.20 ಮಿ.ಮೀ. ಮಳೆ ಬಿದ್ದಿದೆ.


ಹಾರಂಗಿ ನೀರಿನ ಮಟ್ಟ: ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಗುರುವಾರ ನೀರಿನ ಮಟ್ಟ 2856.69 ಅಡಿಗಳಷ್ಟಿತ್ತು. ಕಳೆದ ವರ್ಷ ಇದೇ ಅವಧಿಯಲ್ಲಿ 2856.55 ಅಡಿಗಳಾಗಿತ್ತು. ಪ್ರಸಕ್ತ ಜಲಾಶಯದ ಒಳಹರಿವು 2147 ಕ್ಯುಸೆಕ್’ನಷ್ಟಿದ್ದರೆ, ಕಳೆದ ವರ್ಷ ಇದೇ ದಿನಾಂಕದಂದು 6619 ಕ್ಯುಸೆಕ್’ನಷ್ಟಿತ್ತು. ಗುರುವಾರ ನದಿಗೆ 6014 ಕ್ಯುಸೆಕ್ ಹಾಗೂ ನಾಲೆಗೆ 20 ಕ್ಯುಸೆಕ್ ನೀರು ಹೊರಬಿಡಲಾಗಿದ್ದು, ಕಳೆದ ವರ್ಷ ಇದೇ ದಿನಾಂಕದಂದು ನೀರಿನ ಹೊರ ಹರಿವು ನದಿಗೆ 2825 ಕ್ಯುಸೆಕ್ ಹಾಗೂ ನಾಲೆಗೆ 311 ಕ್ಯುಸೆಕ್’ನಷ್ಟಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು