2:07 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕಡಲ್ಕೊರೆತ ತಡೆಗೋಡೆ ನಿರ್ಮಾಣ: ಕರಾವಳಿಯ 3 ಜಿಲ್ಲೆಗಳಿಗೆ 35 ಕೋಟಿ ಅನುದಾನ, ಹೆಚ್ಚುವರಿ 70 ಕೋಟಿಗೆ ಪ್ರಸ್ತಾವನೆ

23/06/2021, 07:55

ಮಂಗಳೂರು (reporterkarnataka news); ಸಮುದ್ರ ಕೊರೆತ ತಡೆಗೋಡೆ ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಆಧ್ಯತೆಯ ಮೇಲೆ ಕೈಗೊಂಡು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅಧಿಕಾರಿಗಳಿಗೆ ಆದೇಶ ಮಾಡಿದರು.

ಅವರು  ಜಿಲ್ಲಾ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಕರಾವಳಿ ಪ್ರದೇಶದಲ್ಲಿ ಸಮುದ್ರ ಕೊರೆತ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗೆ ನೀಡಿರುವ ಅನುದಾನ ಹಾಗೂ ಬಂದರುಗಳ ಅಭಿವೃದ್ಧಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಸ್ತುತ ಸಾಲಿನ ಸಮುದ್ರ ಕೊರೆತ ಕಾಮಗಾರಿಗಳನ್ನು ಕೈಗೊಳ್ಳಲು ಕರಾವಳಿಯ ಮೂರು ಜಿಲ್ಲೆಗಳಿಗೆ 35 ಕೋಟಿ ಅನುದಾನ ಒದಗಿಸಲಾಗಿದೆ. ಮುಂದುವರೆದ ಕಾಮಗಾರಿಗಳಿಗೆ ಅವಶ್ಯವಿರುವ 70 ಕೋಟಿಯ ಹೆಚ್ಚುವರಿ ಅನುದಾನದ ಪ್ರಸಾವನೆಯನ್ನು ಆರ್ಥಿಕ ಇಲಾಖೆಗೆ ಕಳುಹಿಸಿರುವುದನ್ನು ಮುಖ್ಯ ಮಂತ್ರಿಗಳು ಒಪ್ಪಿಗೆ ಸೂಚಿಸಿರುತ್ತಾರೆ ಎಂದರು.
ಕಡಲ ಕೊರೆತಕ್ಕೆ ಸಂಬಂಧಿಸಿದಂತೆ ಕಳೆದ 3 ವರ್ಷಗಳಿಂದ ಬಾಕಿಯಿರುವ ಕಾಮಗಾರಿಗಳನ್ನು ಪ್ರಸ್ತುತ ಸಾಲಿನ ಬಂದರು ಇಲಾಖೆಯ ಕ್ರಿಯಾ ಯೋಜನೆಗೆ ಸೇರಿಸಿ ಅದಕ್ಕೆ ಅಗತ್ಯವಿರುವ ಅನುದಾನವನ್ನು ಒದಗಿಸಲು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿ ಎಂದು ಸೂಚನೆ ನೀಡಿದರು.
ಏಷ್ಯ ಡೆವಲೆಪ್‍ಮೆಂಟ್ ಬ್ಯಾಂಕ್‍ನ ಆರ್ಥಿಕ ಸಹಕಾರದೊಂದಿಗೆ ಈಗಾಗಲೇ ಪೂರ್ಣಗೊಂಡಿರುವ ಶಾಶ್ವತ ಸಮುದ್ರ ಕೊರೆತ ಕಾಮಗಾರಿಗಳ ನಿರ್ವಹಣೆಗೆ ಅಗತ್ಯವಿರುವ ಕ್ರಿಯಾ ಯೋಜನೆಗಳನ್ನು ರೂಪಿಸಿ ಇದಕ್ಕೆ ಅಗತ್ಯವಿರುವ ಅನುದಾನದ ಬೇಡಿಕೆಯನ್ನು ಸರ್ಕಾರಕ್ಕೆ ಸಲ್ಲಿಸಬೇಕು. ಇದರ ಜೊತೆಯಲ್ಲಿ ಸಮಗ್ರ ತಾಂತ್ರಿಕ ಅಧ್ಯಯನ ನಡೆಸಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕೆಂದು ಸೂಚನೆ ನೀಡಿದರು.
ಈಗಾಗಲೇ ಕೈಗೊಂಡಿರುವ 10 ವಿವಿಧ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವ ಕಾರ್ಯಕ್ಕೆ ಗುತ್ತಿಗೆದಾರರು ಉಚ್ಛ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ತಡೆಯಾಜ್ಞೆ ನೀಡಿರುತ್ತದೆ. ಇದನ್ನು ತೆರವುಗೊಳಿಸಲು ಮೇಲ್ಮನವಿಯನ್ನು ಸಲ್ಲಿಸಿ ತೆರವುಗೊಳಿಸಲು ಮುಂದಾಗಬೇಕು ಎಂದು ಸೂಚನೆ ನೀಡಿದರು.
ಸಾಗರಮಾಲಾ ಯೋಜನೆಯಡಿ ಮಂಗಳೂರಿನ ಮರೀನಾ ಯೋಜನೆಯನ್ನು 340 ಕೋಟಿ ರೂ. ಗಳಲ್ಲಿ ಪ್ರಸ್ತಾವಣೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು, ಈ ಯೋಜನೆಯ ನೀಲಿನಕಾಶೆ ಹಾಗೂ ಪಕ್ಷಿನೋಟಕ್ಕೆ ಅನುಮೋದನೆ ಸಲ್ಲಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲು ಸೂಚನೆ ನೀಡಿದರು.
ಕಡಲ ತೀರದಲ್ಲಿರುವ ಮೀನುಗಾರರ ಮನೆಗಳು ನೆರೆ ಸೇರಿದಂತೆ ಕಡಲ ಕೊರೆತದಿಂದ ಹಾನಿ ಉಂಟಾದಲ್ಲಿ ಅವರ ಮನೆಗಳಿಗೆ ಅಧೀಕೃತ ದಾಖಲೆಗಳನ್ನು ಪಡೆದು ಅವರುಗಳಿಗೆ ಮತ್ಸ್ಯಾಶ್ರಯ ಯೋಜನೆಯಡಿ ಕಾನೂನಾತ್ಮಕ ಪರಿಹಾರವನ್ನು ನೀಡಬೇಕೆಂದು ಸೂಚನೆ ನೀಡಿದರು.
ಸಂಸದ ನಳೀನ್ ಕುಮಾರ್ ಕಟೀಲ್ ಮಾತನಾಡಿ, ಮರೀನಾ, ಗುರುಪುರ ಮತ್ತು ನೇತ್ರಾವತಿ ನದಿಗಳಲ್ಲಿ ಸರಕು ಸಾಗಾಣಿಕೆ ದ್ವೀಪಗಳ ಅಭಿವೃದ್ಧಿ ಸೇರಿದಂತೆ ಪ್ರವಾಸೋಧ್ಯಮ ಚಟುಚಟಿಕೆಗಳನ್ನು ಕೈಗೊಳ್ಳಲು 340 ಕೋಟಿ ವೆಚ್ಚದಲ್ಲಿ ಸಾಗರಮಾಲಾ ಯೋಜನೆ ಹಾಗೂ ಇನ್‍ಲ್ಯಾಂಡ್ ವಾಟರ್ ವೇವ್ಸ್ ಅಥಾರಿಟಿ ಆಫ್ ಇಂಡಿಯಾ ಸಹಯೋಗದಿಂದ ಕೈಗೊಳ್ಳಲಾಗುತ್ತಿದೆ ಎಂದರು.
ಕೇಂದ್ರ ಸರ್ಕಾರದ ಸಾಗರಮಾಲಾ ಯೋಜನೆಯಡಿ ಮಂಗಳೂರಿನ ಹಳೆ ಬಂದರಿನ ಕ್ಯಾಪಿಟಲ್ ಡ್ರೆಜ್ಜಿಂಗ್ ಕಾಮಗಾರಿ ಹಾಗೂ ಕೋಸ್ಟಲ್ ಬರ್ತ್ ನಿರ್ಮಾಣ ಕಾಮಗಾರಿಗಳನ್ನು ಕ್ರಮವಾಗಿ 29 ಕೋಟಿ ಹಾಗೂ 65 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ ಎಂದರು.
ಸಭೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ, ಶಾಸಕರಾದ ಉಮಾನಾಥ್ ಕೋಟ್ಯಾನ್, ವೇದವ್ಯಾಸ್ ಕಾಮತ್, ಯು.ಟಿ.ಖಾದರ್, ಭರತ್ ಶೆಟ್ಟಿ, ರಾಜೇಶ್ ನಾಯ್ಕ್ ಹಾಗೂ ಮತ್ತಿತರರ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು