ಇತ್ತೀಚಿನ ಸುದ್ದಿ
ಭಾರೀ ವರ್ಷಧಾರೆ: ಹೊರನಾಡು-ಕಳಸ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮುಳುಗಡೆಗೆ
05/08/2022, 21:38
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಜಿಲ್ಲೆಯ ಕುದುರೆಮುಖ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳಸ ತಾಲೂಕಿನ ಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಹೊರನಾಡು-ಕಳಸ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ಈ ವರ್ಷದಲ್ಲಿ ಎರಡನೇ ಬಾರಿ ಹೆಬ್ಬಾಳೆ ಸೇತುವೆ ಮುಳುಗಡೆಯಾಗುತ್ತಿದೆ.
ಭದ್ರಾ ನದಿ ಹರಿವಿನಿಂದ ಹೆಬ್ಬಾಳೆ ಸೇತುವೆ ಮುಳುಗಡೆ ಹಿನ್ನೆಲೆ ಪರ್ಯಾಯ ಮಾರ್ಗವಾಗಿ ಹಳ್ಳುವಳ್ಳಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.