10:30 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜು: ಆ.11ರಂದು ತುಳುನಾಡಿನಲ್ಲಿ ಆಷಾಡ ಮಾಸದ ವೈಶಿಷ್ಟ್ಯ ಸಾರುವ ‘ಆಟಿಡೊಂಜಿ ದಿನ’ 

05/08/2022, 23:19

ಮಂಗಳೂರು(reporterkarnataka.com): ಕರ್ನಾಟಕ ಜಾನಪದ ಪರಿಷತ್ ದ.ಕ. ಜಿಲ್ಲಾ ಘಟಕ, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಕನ್ನಡ ಸಂಘ ಹಾಗೂ ಮಂಗಳೂರು ವಿವಿಯ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠದ ಆಶ್ರಯದಲ್ಲಿ ತುಳುನಾಡಿನಲ್ಲಿ ಆಷಾಢ ಮಾಸದ ವೈಶಿಷ್ಟ್ಯವನ್ನು ಸಾರುವ ‘ಆಟಿಡೊಂಜಿ ದಿನ’ ಕಾರ್ಯಕ್ರಮ ನಗರದ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಆಗಸ್ಟ್ 11ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ ಉದ್ಘಾಟನೆ ನೆರವೇರಿಸುವರು. ವಿವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಅನಸೂಯ ರೈ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಜಾನಪದ ಪರಿಷತ್ ದ.ಕ. ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್, ಮಂಗಳೂರು ವಿವಿ ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮಾಧವ ಎಂ.ಕೆ., ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ, ಕಜಾಪ ಕಾಸರಗೋಡು ಜಿಲ್ಲೆ ಅಧ್ಯಕ್ಷ ಎ.ಆರ್. ಸುಬ್ಬಯ್ಯ ಕಟ್ಟೆ ಹಾಗೂ ನ್ಯಾಯವಾದಿ ಮಹಮ್ಮದ್ ಅಸ್ಗರ್ ಭಾಗವಹಿಸಲಿರುವರು. 

ಉಪನ್ಯಾಸಕ ಡಾ. ಅರುಣ್ ಉಳ್ಳಾಲ್ ವಿಶೇಷ ಉಪನ್ಯಾಸ ನೀಡುವರು. ಈ ಸಂದರ್ಭದಲ್ಲಿ ಮಂಗಳೂರು ವಿವಿಯಲ್ಲಿ ಡಾಕ್ಟರೇಟ್ ಪಡೆದ ಡಾ. ಅರುಣ್ ಉಳ್ಳಾಲ್ ಅವರನ್ನು ಸನ್ಮಾನಿಸಲಾಗುವುದು.

ಭಾರತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸವಿ ನೆನಪಿಗಾಗಿ ಅಮೃತ ಭಾರತಿಗೆ ಜಾನಪದದ ಆರತಿ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು