7:24 AM Monday24 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ ದೆಹಲಿಗೆ: ಸಂಪುಟ ವಿಸ್ತರಣೆಗೆ ಈ ಬಾರಿಯಾದರೂ ಸಿಗುತ್ತಾ ಗ್ರೀನ್ ಸಿಗ್ನಲ್? 

06/08/2022, 09:56

ಬೆಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ದಿನಗಳ ಅವಧಿಯಲ್ಲಿ ನಡೆದ ಸರಣಿ ಕೊಲೆ ರಾಜ್ಯ ಮಾತ್ರವಲ್ಲದೆ ರಾಷ್ಟ್ರ ಬಿಜೆಪಿಯಲ್ಲೂ ಸಂಚಲನ ಮೂಡಿಸಿದೆ. ಇದು ಎಷ್ಟರ ಮಟ್ಟಿಗೆ ಪಕ್ಷವನ್ನು ಘಾಸಿಗೊಳಿಸಿದೆ ಎಂದರೆ ಸ್ವತಃ ಗೃಹ ಸಚಿವ  ಅಮಿತ್ ಶಾ ಅವರೇ ಖುದ್ದಾಗಿ ರಾಜ್ಯಕ್ಕೆ ಭೇಟಿ ಕೊಟ್ಟು ಹಿಂತಿರುಗಿದ್ದಾರೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ಹೊರಟ್ಟಿದ್ದಾರೆ. ಸರಕಾರದ ಸಂಪುಟ ವಿಸ್ತರಣೆ ಕುರಿತ ಚರ್ಚೆ ಮತ್ತೆ ಮುನ್ನೆಲೆ ಬಂದಿದೆ.

ದೆಹಲಿಗೆ ತೆರಳಿರುವ ಸಿಎಂ, ಸಂಜೆ 4.30ಕ್ಕೆ ‘ಆಜಾದಿ ಕಾ ಅಮೃತ್ ಮಹೋತ್ಸವ’ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ರಾತ್ರಿ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಡಿದ್ದು ಬೆಳಗ್ಗೆಯಿಂದ ಸಂಜೆಯವರೆಗೂ ನೀತಿ ಆಯೋಗದ ಸಭೆಯಲ್ಲಿ ಭಾಗಿಯಾಗಲಿರುವ ಸಿಎಂ ಭಾನುವಾರ ರಾತ್ರಿ 11.30 ರ ವಿಮಾನದಲ್ಲಿ ಬೆಂಗಳೂರಿಗೆ ವಾಪಸ್​​ ಆಗಲಿದ್ದಾರೆ. ಈ ಸಮಯದಲ್ಲಿ ಬಿಜೆಪಿ ಹೈಕಮಾಂಡ್ ನಾಯಕರು ಪಾಲ್ಗೊಳ್ಳಲಿರುವ ಹಿನ್ನೆಲೆ ವರಿಷ್ಠರ ಜೊತೆ ಮುಖ್ಯಮಂತ್ರಿ ಮಾತುಕತೆ ನಡೆಸಲಿದ್ದಾರೆ. ಇದಕ್ಕಾಗಿ ಜೆ.ಪಿ.ನಡ್ಡಾ, ಅಮಿತ್ ಶಾ ಅವರ ಸಮಯಾವಕಾಶ ಕೋರಿದ್ದಾರೆ.

ಒಂದು ವೇಳೆ ಅವಕಾಶ ಸಿಕ್ಕಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ವಿಚಾರ ಕುರಿತು ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಈ ಹಿಂದೆಯೂ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಐದಾರು ಬಾರಿ ಭೇಟಿ ಮಾಡಿ ಸಂಪುಟ ವಿಸ್ತರಣೆ ಕುರಿತು ಮಾತುಕತೆ ನಡೆಸಿದರೂ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿಲ್ಲ. ಈ ಬಾರಿ ಸಿಗುತ್ತಾ ಕಾದುನೋಡಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು