4:00 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಆರ್ ಬಿಐನಿಂದ ಮತ್ತೆ ರೆಪೋ ದರ ಹೆಚ್ಚಳ: ಗೃಹ, ವಾಹನ ಸಾಲದ ಇಎಂಐ ಹೊರೆ ಏರಿಕೆ

06/08/2022, 11:46

ಹೊಸದಿಲ್ಲಿ(reporterkarnataka.com): ಭಾರತೀಯ ರಿಸರ್ವ್ ಬ್ಯಾಂಕ್ ಮತ್ತೆ ಪ್ರಮುಖ ಬಡ್ಡಿದರವನ್ನು 50 ಬೇಸಿಸ್ ಪಾಯಿಂಟ್ಸ್ ಗಳಷ್ಟು ಏರಿಸಿದೆ. ಇದರೊಂದಿಗೆ ಬಡ್ಡಿದರ ಶೇ.5.40ಕ್ಕೆ ಏರಿಕೆಯಾದಂತಾಗಿದೆ.

ದೇಶದಲ್ಲಿನ ಹಣದುಬ್ಬರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಸತತ ಮೂರನೇ ಬಾರಿ ಬಡ್ಡಿದರವನ್ನು ಏರಿಕೆ ಮಾಡಿದ್ದು, ಇದರ ಪರಿಣಾಮ ಗೃಹ, ವಾಹನ ಸಾಲಗಾರರಿಗೆ ಮತ್ತಷ್ಟು ಹೊರೆ ಬಿದ್ದಂತಾಗಿದೆ.

ಜೂನ್ ತಿಂಗಳಿನಲ್ಲಿ ಚಿಲ್ಲರೆ ಹಣದುಬ್ಬರ ಶೇ.7ಕ್ಕೆ ಏರಿಕೆಯಾಗಿತ್ತು. ಇದು ಆರ್ ಬಿಐನ ನಿರೀಕ್ಷಿತ ಶೇ.2ರಿಂದ 6ರ ಮಟ್ಟಕ್ಕಿಂತ ಹೆಚ್ಚಳವಾಗಿತ್ತು. ಈ ಹಿನ್ನೆಲೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ (ಎಂಪಿಸಿ) ಮೂಲ ರೆಪೋ ದರವನ್ನು 50 ಬೇಸಿಸ್ ಪಾಯಿಂಟ್ಸ್ ಗಳಷ್ಟು ಹೆಚ್ಚಳ ಮಾಡಿರುವುದಾಗಿ ತಿಳಿಸಿದೆ.

ಕಳೆದ ಮೇ ತಿಂಗಳಿನಲ್ಲಿ ಆರ್ ಬಿಐ ರೆಪೋ ದರವನ್ನು 40 ಬೇಸಿಸ್ ಪಾಯಿಂಟ್ಸ್ ಗಳಷ್ಟು ಏರಿಕೆ ಮಾಡಿದ್ದು, ಜೂನ್ ತಿಂಗಳಿನಲ್ಲಿ 50 ಬೇಸಿಸ್ ಪಾಯಿಂಟ್ಸ್ ಗಳಷ್ಟು ಹೆಚ್ಚಿಸಿತ್ತು. ಹಣದುಬ್ಬರ ನಿಯಂತ್ರಣ ಮತ್ತು ಆರ್ಥಿಕ ಸ್ಥಿರತೆಗಾಗಿ ರೆಪೋ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು