ಇತ್ತೀಚಿನ ಸುದ್ದಿ
ಕೊಟ್ಟಿಗೆಹಾರ: ಮನೆಯ ಹಿಂಭಾಗದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ; ಕಾರಣ ಇನ್ನೂ ನಿಗೂಢ
06/08/2022, 11:52
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುಲಿಬೈಲ್ ಅಂತೋಣಿ (38) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಅಂತೋಣಿ ಅವರು ಮನೆಯ ಹಿಂಭಾಗದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸಾವಿನ ಬಗ್ಗೆ ಕಾರಣ ತಿಳಿದು ಬಂದಿಲ್ಲ.ಮೂಡಿಗೆರೆ ತಾಲೂಕಿನ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.