5:50 AM Monday24 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್: ದೆಹಲಿ ಭೇಟಿ ದಿಢೀರ್ ರದ್ದು; ಸಂಪುಟ ವಿಸ್ತರಣೆಗೆ ಮತ್ತೆ ಕಂಟಕ

06/08/2022, 11:58

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಅವರ ದೆಹಲಿ ಪ್ರವಾಸ ರದ್ದಾಗಿದೆ. ಬೊಮ್ಮಾಯಿ ಅವರು ಈ ಕುರಿತು ಟ್ವೀಟ್ ಮಾಡಿದ್ದಾರೆ.

ಬೊಮ್ಮಾಯಿ ಅವರು ಇಂದು ದಿಲ್ಲಿಗೆ ತೆರಳುವವರಿದ್ದರು. ಬೆಳಗ್ಗೆ 
11.30ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ದಿಲ್ಲಿಗೆ ಪ್ರಯಾಣಿಸಲಿದ್ದರು. ಸಂಜೆ 4.30ಕ್ಕೆ ‘ಆಜಾದಿ ಕಾ ಅಮೃತ್ ಮಹೋತ್ಸವ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದರು. ರಾತ್ರಿ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಿ, ನಾಡಿದ್ದು ಬೆಳಗ್ಗೆಯಿಂದ ಸಂಜೆಯವರೆಗೂ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳುವ ಕಾರ್ಯಕ್ರಮ ಇತ್ತು. ಆದರೆ ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಅವರ ಈ ಎಲ್ಲ ಕಾರ್ಯಕ್ರಮಗಳು ರದ್ದಾಗಿದೆ.

ದೆಹಲಿ ಭೇಟಿ ಸಂದರ್ಭದಲ್ಲಿ  ಬಿಜೆಪಿ ಹೈಕಮಾಂಡ್ ನಾಯಕರು ಪಾಲ್ಗೊಳ್ಳಲಿರುವ ಹಿನ್ನೆಲೆ ವರಿಷ್ಠರ ಜೊತೆ ಮುಖ್ಯಮಂತ್ರಿ ಮಾತುಕತೆ ನಡೆಸುವ ಸಾಧ್ಯತೆ ಇತ್ತು. ಇದಕ್ಕಾಗಿ ಜೆ.ಪಿ.ನಡ್ಡಾ, ಅಮಿತ್ ಶಾ ಅವರ ಸಮಯಾವಕಾಶ ಕೋರಿದ್ದರು.

ಒಂದು ವೇಳೆ ಭೇಟಿಗೆ ಅವಕಾಶ ಸಿಕ್ಕಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ವಿಚಾರ ಕುರಿತು ಮಾತುಕತೆ ನಡೆಸುವ ಸಾಧ್ಯತೆ ಇತ್ತು.ಆದರೆ ಇದೆಲ್ಲ ನನೆಗುದಿಗೆ ಬಿದ್ದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು