12:09 AM Monday22 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ವಿಶ್ವ ವಿಖ್ಯಾತ ಮೈಸೂರು ದಸರಾ ಗಜ ಪಯಣಕ್ಕೆ ಚಾಲನೆ: ವರುಣನ ಸಿಂಚನದೊಂದಿಗೆ ಹೆಜ್ಜೆ ಹಾಕಿದ ಕ್ಯಾಪ್ಟನ್ ಅಭಿಮನ್ಯು ತಂಡ

07/08/2022, 12:58

ರಾಜೇಶ್ವರಿ ರಾವ್ ಹುಣಸೂರು ಮೈಸೂರು

info.reporterkarnataka@gmail.com

ವಿಶ್ವವಿಖ್ಯಾತ ಮೈಸೂರು ದಸರಾಗೆ ಮುನ್ನುಡಿಯಾ ಗಜಪಯಣಕ್ಕೆ ಭಾನುವಾರ ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಚಾಲನೆ ನೀಡಲಾಯಿತು.

ವೀರನಹೊಸಹಳ್ಳಿ ಗ್ರಾಮದಲ್ಲಿ ಬೆಳಗ್ಗೆ 9.01ರಿಂದ 9.35ರ ಕನ್ಯಾ ಲಗ್ನದಲ್ಲಿ ಸಾಂಪ್ರದಾಯಿಕವಾಗಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಗೆ ಪೂಜೆ ಸಲ್ಲಿಸುವುದರ ಮೂಲಕ ಗಜಪಯಣಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ಸರಕಾರದ ಪರವಾಗಿ ಚಾಲನೆ ನೀಡಿದರು. 

ಅಭಿಮನ್ಯು, ಅರ್ಜುನ, ಧನಂಜಯ, ಮಹೇಂದ್ರ, ಭೀಮ, ಚೈತ್ರಾ, ಗೋಪಾಲಸ್ವಾಮಿ, ಕಾವೇರಿ, ಲಕ್ಷ್ಮೀ ಆನೆಗಳಿಗೆ ಪುಷ್ಪಾರ್ಚನೆ ಮಾಡಿ, ಫಲತಾಂಬೂಲ ನೀಡಲಾಯಿತು. ಕಲಾ ತಂಡಗಳು, ಮಂಗಳವಾದ್ಯದೊಂದಿಗೆ ವರುಣನ ಸಿಂಚನದ ನಡುವೆ ಗಜಪಡೆಗಳು ಕಾಡಿನಿಂದ ನಾಡಿನತ್ತ ಹೆಜ್ಜೆ ಹಾಕಿದವು.

ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್, ಗಜಪಯಣಕ್ಕೆ ಇಂದು ವಿಜೃಂಭಣೆಯಿಂದ ಚಾಲನೆ ನೀಡಲಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರ ನೇತೃತ್ವದಲ್ಲಿ ಆನೆಗಳನ್ನು ಮೈಸೂರಿಗೆ ಕರೆತರುವ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಆ.10ರಂದು ಅರಮನೆಗೆ ಗಜ ಪಡೆಯ ಆಗಮನವಾಗಲಿದೆ. ಅಂದು ಬೆಳಗ್ಗೆ 9.20ರಿಂದ 10.00ರ ಕನ್ಯಾ ಲಗ್ನದಲ್ಲಿ ಗಜಪಡೆಯನ್ನು ಬರಮಾಡಿಕೊಳ್ಳಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು