ಇತ್ತೀಚಿನ ಸುದ್ದಿ
ಹಂದಾಡಿ: ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಸಾವು
07/08/2022, 20:25
ಬ್ರಹ್ಮಾವರ(reporterkarnataka.com): ಬ್ರಹ್ಮಾವರ ತಾಲೂಕಿನ ಹಂದಾಡಿ ಗ್ರಾಮದ ಮಕ್ಕಿಮನೆ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮಕ್ಕಿಮನೆ ನಿವಾಸಿ ಬಾಬು ಪೂಜಾರಿ ಮೃತ ದುರ್ದೈವಿ. ಇವರು ಕೃಷಿ ಕೂಲಿ ಕೆಲಸ ಮಾಡಿಕೊಂಡಿದ್ದು, ಮಗಳ ಮನೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆರೆ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ಠಾಣೆ ಪ್ರಕರಣ ದಾಖಲಾಗಿದೆ.